Kannada NewsLatest
ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೊಲ್ಲೆ ಮತದಾನ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಯಕ್ಸಂಬಾ ಪಟ್ಟಣ ಪಂಚಾಯತ ಚುನಾವಣೆ ಅಂಗವಾಗಿ ಸೋಮವಾರ ವಾರ್ಡ ನಂ 9ರ ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ ಮತಗಟ್ಟೆಗೆ ಮುಜರಾಯಿ ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಬಸವಜ್ಯೋತಿ ಯುತ್ ಫೌಂಡೇಶನ್ ಅಧ್ಯಕ್ಷರಾದ ಬಸವಪ್ರಸಾದ ಜೊಲ್ಲೆಯವರು ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.
ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಗ್ರಾಮೀಣ ಭಾಗದ ಸರ್ವತೋಮುಖ ಅಭೀವೃದ್ದಿಗಾಗಿ ಹಾಗೂ ಜನರ ಹಿತಕ್ಕಾಗಿ ಶ್ರಮಿಸಲು ಉತ್ತಮ ನಾಯಕನ ಆಯ್ಕೆಗಾಗಿ ನನ್ನ ಹಕ್ಕು ಚಲಾಯಿಸಿದ್ದು ಪಟ್ಟಣದ ಎಲ್ಲಾ ಮತದಾರ ಭಾಂದವರು ನಿಮ್ಮ ವಾರ್ಡ ನಲ್ಲಿ ನಡೆಯುತ್ತಿರುವ ಚುನಾವಣಾ ಪ್ರಕ್ರಿಯಲ್ಲಿ ಭಾಗವಹಿಸಿ ಮತದಾನ ಮಾಡಿ ಎಂದು ಹೇಳಿದರು.
ಅಪೆಕ್ಸ್ ಬ್ಯಾಂಕ್ ವತಿಯಿಂದ ಚನ್ನರಾಜ ಹಟ್ಟಿಹೊಳಿಗೆ ಸನ್ಮಾನ




