ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ.
ಸದರಿ ಮೌಲ್ಯಾಂಕನವನ್ನು ಹೈಕೋರ್ಟ್ ಏಕಸದಸ್ಯ ಪೀಠವು ರದ್ದುಪಡಿಸಿ ನೀಡಿದ್ದ ತೀರ್ಪಿಗೆ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿರುತ್ತದೆ. ಸದರಿ ವಿಭಾಗೀಯ ಪೀಠವು ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಘನ ಸರ್ವೋಚ್ಚ ನ್ಯಾಯಾಲಯವು ರದ್ದುಪಡಿಸಿತ್ತು ಹಾಗಾಗಿ 5ನೇ ತರಗತಿಯ ವಿದ್ಯಾರ್ಥಿಗಳಿಗೆ ದಿನಾಂಕ:13.03.2024 ರಿಂದ 14.03.2024 ರವರೆಗೆ ಹಾಗೂ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ:13.03.2024 ರಿಂದ 16.03.2024 ರವರೆಗೆ ನಡೆಸಬೇಕಿದ್ದ ಮೌಲ್ಯಾಂಕನವನ್ನು ಉಲ್ಲೇಖ(3) ರ ಪತ್ರದಂತೆ ಮುಂದೂಡಲಾಗಿತ್ತು.
ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠವು ಮೌಲ್ಯಾಂಕನವನ್ನು ನಡೆಸಲು ಅವಕಾಶ ಕಲ್ಪಿಸಿ ತೀರ್ಪು ನೀಡಿದ್ದು, ಅದರಂತೆ 5, 8 ಮತ್ತು 9ನೇ ತರಗತಿಗಳಿಗೆ ಉಲ್ಲೇಖ(3) ರಲ್ಲಿ ಮುಂದೂಡಲಾಗಿದ್ದ ವಿಷಯಗಳ ಪರೀಕ್ಷೆಯನ್ನು ಸೋಮವಾರದಿಂದ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ