Karnataka News
*ಲಂಚ ಕೇಳಿದ ಅಧಿಕಾರಿ ಸಸ್ಪೆಂಡ್ ಮಾಡಿದ ಅಬಕಾರಿ ಸಚಿವ*

ಪ್ರಗತಿವಾಹಿನಿ ಸುದ್ದಿ: ಬಾರ್ ಆಂಡ್ ರೆಸ್ಟೋರೆಂಟ್ ತೆರೆಯಲು ಅನುಮತಿ ನೀಡಲು ಲಂಚ ಕೇಳಿದ ಆರೋಪದ ಹಿನ್ನೆಲೆಯಲ್ಲಿ ಅಬಕಾರಿ ಡಿಸಿಯೊಬ್ಬರನ್ನು ಅಮಾನತು ಮಾಡಿ, ತನಿಖೆ ನಡೆಸುವಂತೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಆದೇಶ ನೀಡಿದ್ದಾರೆ.
ಮಂಡ್ಯದ ಚಂದಾಪುರದಲ್ಲಿ ಬಾರ್ ಆಂಡ್ ರೆಸೋರೆಂಟ್ ತೆರೆಯಲು ಅರ್ಜಿ ಸಲ್ಲಿಸಿದ್ದ ಪುನೀತ್ ಎಂಬುವವರಿಗೆ ಅಬಕಾರಿ ಡಿಸಿ ರವಿಶಂಕರ್ ಎನ್ನುವವರು 40 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ಈ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು. ಲಂಚ ಕೇಳಿದ್ದರ ಬಗ್ಗೆ ವರದಿ ತರಿಸಿಕೊಂಡು ಅಧಿಕಾರಿಯನ್ನು ಸಸ್ಪೆಂಡ್ ಮಾಡುವುದಾಗಿ ತಿಳಿಸಿದ್ದಾರೆ.




