Kannada NewsLatest

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿನಾಯಿತಿ: ಸರಕಾರದ ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಎಸ್ಎಎಸ್ ಎಲ್ ಸಿ ಪರೀಕ್ಷೆ ಬರೆಯುವುದಕ್ಕೆ ವಿದ್ಯಾರ್ಥಿಗಳು ಕನಿಷ್ಟ ಶೇ.75ರಷ್ಟು ಹಾಜರಾತಿ ಹೊಂದುವುದು ಕಡ್ಡಾಯ ಎನ್ನುವ ನಿಯಮವಿದೆ.

ಆದರೆ ಈ ವರ್ಷ ಕೊರೋನಾದಿಂದಾಗಿ ಶಾಲೆಗಳೇ ಸರಿಯಾಗಿ ನಡೆದಿಲ್ಲ. ಜನೆವರಿ 1ರಿಂದ  ಎಸ್ಎಸ್ಎಲ್ ಸಿ ತರಗತಿಗಳು ಆರಂಭವಾದರೂ ವಿದ್ಯಾರ್ಥಿಗಳು ಶಾಲೆಗೆ ಬರುವುದನ್ನು ಕಡ್ಡಾಯಗೊಳಿಸಿರಲಿಲ್ಲ.

ಹಾಗಾಗಿ ಈ ಬಾರಿ ಶೇ. 75ರಷ್ಟು ಹಾಜರಾತಿ ಕಡ್ಡಾಯ ಎನ್ನುವ ನಿಯಮ ಜಾರಿಗೊಳಿಸುವುದು ಸಾಧ್ಯವೇ ಇಲ್ಲ. ಹಾಗಾಗಿ ಪರೀಕ್ಷಾ ಶುಲ್ಕ ಪಾವತಿಸುವ ಎಲ್ಲ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಸರಕಾರ ಆದೇಶ ಹೊರಡಿಸಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button