Belagavi NewsBelgaum NewsLatest

*ಏ.26 ರಿಂದ 28 ರವರಗೆ ಮಾವು ಮತ್ತು ಜೇನು ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತೋಟಗಾರಿಕೆ ಇಲಾಖೆಯಿಂದ ಮಾವು ಮತ್ತು ಜೇನು ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಏ.26 ರಿಂದ 28 ರವರೆಗೆ ಬೆಳಗ್ಗೆ 9 ರಿಂದ ರಾತ್ರಿ 8 ಗಂಟೆಯವರೆಗೆ ನಗರದ ಹೂಮ್ ಪಾರ್ಕ, ಕ್ಲಬ್ ರೋಡ ಬೆಳಗಾವಿಯಲ್ಲಿ ಆಯೋಜಿಸಲಾಗಿದೆ.

ಶನಿವಾರ (ಏ.26) ರಂದು ಬೆಳಿಗ್ಗೆ 11 ಗಂಟೆಗೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಘಾಟಿಸಲಿದ್ದಾರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ, ಶಾಸಕರಾದ ಆಸೀಫ್ (ರಾಜು) ಸೇರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

Home add -Advt

ವಿಶೇಷ ಆಮಂತ್ರಿತರಾಗಿ ಸರ್ಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಕರ್ನಾಟಕ ಸರ್ಕಾರದ ಮಾನ್ಯ ವಿಶೇಷ ಪ್ರತಿನಿಧಿ-2 ನವದೆಹಲಿ ಪ್ರಕಾಶ ಹುಕ್ಕೇರಿ, ವಾಯವ್ಯ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷರಾದ ಭರಮಗೌಡ ಕಾಗೆ, ಮತ್ತು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ ಅವರು ಆಗಮಿಸಲಿದ್ದಾರೆ. ಜಿಲ್ಲೆಯ ಎಲ್ಲ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ವೈಜ್ಞಾನಿಕ ರೀತಿಯಲ್ಲಿ ಕಾಯಿಗಳನ್ನು ಕಟಾವು ಮಾಡಿ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಮೇಳದಲ್ಲಿ ಮಾರಾಟ ಮಾಡಲು ಆಸಕ್ತ ರೈತರು ತಮ್ಮ ತಾಲೂಕಿನ ತೋಟಗಾರಿಕಾ ಅಧಿಕಾರಿಗಳನ್ನು ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾವ) ಬೆಳಗಾವಿ (ಮೊ. ಸಂ: 9448863810) ಗೆ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಮಾವು ಮತ್ತು ಜೇನು ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳದ ಸದುಪಯೋಗ ಪಡೆದಕೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕ (ಜಿ.ಪಂ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button