*ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ದೇಶದ ಆರ್ಥಿಕತೆ ಎತ್ತಿ ಹಿಡಿಯಬೇಕು: ಸಿಎಂ ಸಿದ್ದರಾಮಯ್ಯ*

ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ (ಅಸ್ಮಿತೆ ಕಾರ್ಯಕ್ರಮ)
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಿಳೆಯರು ದೌರ್ಜನ್ಯ ಹಾಗೂ ಶೋಷಣೆಗೊಳಗಾದ ವರ್ಗ ಅವರು ಶಿಕ್ಷಣ ಪಡೆದು ಆರ್ಥಿಕ ಸಬಲತೆ ಕಾಣಬೇಕು. ಹೆಚ್ಚು ಉದ್ಯೋಗಾವಕಾಶ ಸೃಷ್ಟಿಸುವಂತೆ ಸ್ವಯಂ ಉದ್ಯೋಗ ಕೈಗೊಳ್ಳಲು ಉತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಇವರ ಸಹಯೋಗದಲ್ಲಿ ಗುರುವಾರ (ಡಿ.07) ನಡೆದ ಮಹಿಳಾ ಸ್ವ-ಸಹಾಯ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ (ಅಸ್ಮಿತೆ) ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸ್ವ-ಸಹಾಯ ಸಂಘಗಳ ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆ ಅವಶ್ಯವಿದ್ದು, ಈ ನಿಟ್ಟಿನಲ್ಲಿ ಮಾರಾಟ ಮೇಳ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಸುಮಾರು ಒಂದು ವಾರ ಈ ಮಾರಾಟ ಮೇಳ ನಡೆಯಲಿದೆ. ಮಹಿಳಾ ಸ್ವ-ಸಹಾಯ ಸಂಘಗಳು ವಸ್ತುಗಳಿಗೆ ಮಾರುಕಟ್ಟೆ ನೀಡುವ ಉದ್ದೇಶ ಇದಾಗಿದೆ. ತಯಾರಿತ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗಬೇಕು ಎಂದು ತಿಳಿಸಿದರು.
ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸಿ ಬೇಡಿಕೆ ಹೆಚ್ಚಿಸಿ:
ಮಾರುಕಟ್ಟೆ ಜೊತೆಗೆ ಗ್ರಾಹಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈಗಾಗಲೇ ವಿವಿಧ ಉತ್ಪನ್ನಗಳ ಮಾರಾಟಕ್ಕಾಗಿ ಮಾರುಕಟ್ಟೆಯಲ್ಲಿ ಪೈಪೋಟಿ ಹೆಚ್ಚಿದೆ ಅದಕ್ಕೆ ಪೂರಕವಾಗಿ ಸ್ವ-ಸಹಾಯ ಸಂಘಗಳು ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವ ಮೂಲಕ ಬೇಡಿಕೆ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.
ನಗರ ಪ್ರದೇಶಗಳಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಸ್ವ ಸಹಾಯ ಸಂಘಗಳು ಇವೆ. ಅವರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ 131 ಕೋಟಿ ರೂಪಾಯಿ ವ್ಯಯ ಮಾಡುವುದರ ಮೂಲಕ ಸಹಾಯ ಮಾಡಲಾಗಿದೆ.
ಕಳದೆ ವರ್ಷ ಆಯೋಜನೆ ಮಾಡಿದ ಮಾರಾಟ ಮೇಳದಲ್ಲಿ 3 ಕೋಟಿ ರೂಪಾಯಿ ಲಾಭ ಬಂದಿದೆ.

ಮಹಿಳೆಯರು ದೇಶ ಆರ್ಥಿಕ ಬಲ:
ಮಹಿಳೆಯರು ಮನೆಗಳಿಗೆ ಮಾತ್ರ ಸೀಮಿತವಾಗಬಾರದು ದೇಶದ ಆರ್ಥಿಕ ಬಲ ಹೆಚ್ಚಿಸಲು ಮಹಿಳೆಯರ ಪಾತ್ರ ಬಹಳಷ್ಟಿದೆ ಅದಕ್ಕಾಗಿ ರಾಜ್ಯದ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.
1 ಕೋಟಿ 17 ಲಕ್ಷ ನೋಂದಾಯಿತ (ಮನೆ ಯಜಮಾನಿಯರಿಗೆ) ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ಪ್ರತಿ ತಿಂಗಳು 2 ಸಾವಿರ ಹಣ ವರ್ಗಾವಣೆ ಮಾಡಲಾಗುತ್ತಿದೆ. ಸರ್ಕಾರ ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿ ತರುವ ಮೂಲಕ ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸುತ್ತಿದೆ ಎಂದರು.
ಅದೇ ರೀತಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಒಬ್ಬ ಸದಸ್ಯರಿಗೆ ಒಟ್ಟು 10 ಕೆಜಿ ಅಕ್ಕಿ ವಿತರಣೆ ಲೆಕ್ಕದಲ್ಲಿ ಪ್ರತಿ ಕೆಜಿಗೆ 170 ರೂಪಾಯಿ ಹಾಗೂ 5 ಕೆಜಿ ಅಕ್ಕಿ ನೀಡಲಾಗುತ್ತಿದೆ ಅದರಂತೆ ಇನ್ನೊಂದು ಜನಪರ ಸರ್ಕಾರದ ಯೋಜನೆ ಯುವ ನಿಧಿ ಮೂಲಕ ಪದವೀಧರರಿಗೆ ಆರ್ಥಿಕ ನೆರವು ಸಹ ನೀಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಸಿಂ ಸಿದ್ದರಾಮಯ್ಯ ಅವರು ಹೇಳಿದರು.
ಸ್ವ ಸಹಾಯ ಸಂಘಗಳಿಗೆ ಚೆಕ್ ವಿತರಣೆ:
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಸಂಜೀವಿನಿ ಯೋಜನೆಯಡಿ ವಿವಿಧ ಜಿಲ್ಲೆಯಿಂದ ಆಗಮಿಸಿದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಉದ್ಯಿಮೆ ಬಂಡವಾಳಕ್ಕಾಗಿ ಚೆಕ್ ವಿತರಣೆ ಮಾಡಿದರು.
ವೈದ್ಯಕೀಯ ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಶರಣ್ ಪ್ರಕಾಶ ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು ಡಾ. ಶಾಲಿನಿ ರಜನೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಹರ್ಷಲ್ ಭೋಯಾರ್, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ನಿರ್ದೇಶಕಿ ಪಿ.ಐ ವಿದ್ಯಾ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು ಹಾಗೂ ಜಿಲ್ಲೆಯಿಂದ ವಿವಿಧ ಸ್ವ ಸಹಾಯ ಸಂಘಗಳ ಮಹಿಳಾ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ