Belagavi NewsBelgaum NewsKannada NewsKarnataka News

*ಬಾಂಗ್ಲಾ ನುಸುಳುಕೊರರನ್ನು ರಾಜ್ಯದಿಂದ ಗಡಿಪಾರು ಮಾಡಿ: ಶ್ರೀರಾಮ ಸೇನೆ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರಾವಾಗಿ ಅತ್ಯಾಚಾರ ನಡೆಯುತ್ತಿದೆ. ಹಾಗೂ ರಾಜ್ಯದಲ್ಲಿ‌ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.‌

ಇಂದು ಬೆಳಗಾವಿಯ ಚನ್ನಮ್ಮ ವೃತ್ತದಿಂದ ಶ್ರೀರಾಮ ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಚನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನಾ ರ್ಯಾಲಿಯು ಡಿಸಿ ಕಚೇರಿ,  ಆರ್ ಟಿ ಓ ಸರ್ಕಲ್ ಮಾರ್ಗವಾಗಿ ಎಸ್ ಪಿ ಕಚೇರಿಗೆ ಹೋಗಿ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಅವರು,  ಬಾಂಗ್ಲಾದಲ್ಲಿ ಇರುವ ಅಲ್ಪ ಸಂಖ್ಯಾತ ಹಿಂದುಗಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಲಾಗುತ್ತಿದೆ. ಇದು ಖಂಡನೀಯ, ನಮ್ಮ ರಾಜ್ಯದಲ್ಲಿ 10 ಲಕ್ಷ ಬಾಂಗ್ಲಾ ಮುಸ್ಲಿಂ ನುಸುಳುಕೊರರಿದ್ದಾರೆ. ಬೆಳಗಾವಿಯಲ್ಲಿ 8-9 ಸಾವಿರ ಬಾಂಗ್ಲಾ ಮುಸ್ಲಿಂ ನುಸುಳುಕೊರರಿದ್ದಾರೆ.‌15 ದಿನದಲ್ಲಿ ಅವರನ್ನು ದೇಶದಿಂದ ಹೊರಹಾಕಬೇಕು. ಇಲ್ಲದಿದ್ದರೆ ನಾವೆ ನುಗ್ಗಿ ಹೊರ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button