Latest

ಮಾಜಿ ಸಚಿವ ಪ್ರಭಾಕರ ರಾಣೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ, ಕಾರವಾರ: ವಯಸ್ಕ ಶಿಕ್ಷಣ ಮಾಜಿ ಸಚಿವ, ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಪ್ರಭಾಕರ ರಾಣೆ ಅವರ ಆರೋಗ್ಯ ಸ್ಥಿತಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

80 ವರ್ಷ ವಯಸ್ಸಿನ ಅವರು ಕಳೆದ ಎರಡು ದಿನಗಳಿಂದ ಜ್ವರ ಬಾಧೆಗೆ ಒಳಗಾದ ಹಿನ್ನೆಲೆಯಲ್ಲಿ, ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾರವಾರ- ಜೊಯಿಡಾ ಕ್ಷೇತ್ರದಿಂದ ಮೂರು ಅವಧಿಗೆ ಅವರು ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದು ವಯಸ್ಕ ಶಿಕ್ಷಣ ಸಚಿವರಾಗಿಯೂ ಸೇವೆಗೈದಿದ್ದಾರೆ. ಮೂಲತಃ ಕಾರವಾರ ತಾಲೂಕಿ ಸಿದ್ದರ ಗ್ರಾಮದ ಅವರು, ಶಿಕ್ಷಕ ವೃತ್ತಿಯಿಂದ ಸಚಿವ ಸ್ಥಾನದವರೆಗೂ ಏರಿದ್ದು ಸಿದ್ದರ, ಕಾರವಾರ, ಸದಾಶಿವಗಡ, ಜೊಯಿಡಾ, ರಾಮನಗರ ಸೇರಿದಂತೆ ಹಲವೆಡೆ ಶೈಕ್ಷಣಿಕ ಸಂಸ್ಥೆಗಳನ್ನು ತೆರೆದು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

ನ್ಯಾಷನಲ್ ಹಿಲ್ ವ್ಯೂವ್ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದು ಯಾರು ಗೊತ್ತೇ?

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button