Kannada NewsKarnataka NewsLatest

ಶಿವಮೊಗ್ಗದಿಂದ ವಿಮಾನಯಾನ ಸೇವೆ ವಿಸ್ತರಣೆ

ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ: ಇಲ್ಲಿನ ವಿಮಾನ ನಿಲ್ದಾಣದಿಂದ ಬೆಂಗಳೂರಿಗಷ್ಟೇ ಸೀಮಿತವಾಗಿದ್ದ ವಿಮಾನಯಾನವನ್ನು ಇದೀಗ ವಿಸ್ತರಣೆ ಮಾಡಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಗೋವಾ, ತಿರುಪತಿ ಮತ್ತು ಹೈದರಾಬಾದ್ ಗೆ ನೇರ ವಿಮಾನ ಶೀಘ್ರವೇ ಆರಂಭಗೊಳ್ಳಲಿದೆ.

Home add -Advt

 ನವೆಂಬರ್‌ 17 ರಿಂದ ಸ್ಟಾರ್‌ ಏರ್‌ಲೈನ್ಸ್ ವಿಮಾನಯಾನ ಸಂಸ್ಥೆ ಈ ಸೇವೆ ಆರಂಭಿಸುತ್ತಿದೆ. ಸಂಸ್ಥೆಯ ವೆಬ್​ಸೈಟ್​ನಲ್ಲಿ ಟಿಕೆಟ್‌  ಬುಕ್ಕಿಂಗ್ ಮಾಡಿಕೊಳ್ಳಬಹುದು ಎಂದು ಸ್ಟಾರ್ ಏರ್‌ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿಮ್ರಾನ್ ಸಿಂಗ್ ತಿವಾನಾ ತಿಳಿಸಿದ್ದಾರೆ.

ಹೈದರಾಬಾದ್‌ನಿಂದ ಬೆಳಗ್ಗೆ 9.30ಕ್ಕೆ ಹೊರಡುವ ವಿಮಾನ ಬೆಳಗ್ಗೆ 10.35ಕ್ಕೆ ಶಿವಮೊಗ್ಗ ತಲುಪಲಿದೆ. ಬೆಳಗ್ಗೆ 11ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 12ಕ್ಕೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಮಧ್ಯಾಹ್ನ 12.35ಕ್ಕೆ ಹೊರಟು ಮಧ್ಯಾಹ್ನ 1.40ಕ್ಕೆ ಶಿವಮೊಗ್ಗ ತಲುಪಲಿದೆ.  ಮಧ್ಯಾಹ್ನ 1.55ಕ್ಕೆ ಶಿವಮೊಗ್ಗದಿಂದ ಹೊರಟು ಮಧ್ಯಾಹ್ನ 2.45ಕ್ಕೆ ಗೋವಾ ತಲುಪಲಿದೆ ಎಂದು ಸ್ಟಾರ್ ಏರ್ ಸಂಸ್ಥೆ ತಿಳಿಸಿದೆ.

Related Articles

Back to top button