ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ರೈಲು ಸಂಖ್ಯೆ 07301/07302 ಬೆಳಗಾವಿ- ಮಿರಜ್-ಬೆಳಗಾವಿ ಮತ್ತು ರೈಲು ಸಂಖ್ಯೆ 07303/07304 ಬೆಳಗಾವಿ- ಮಿರಜ್-ಬೆಳಗಾವಿ ಕಾಯ್ದಿರಿಸದ ವಿಶೇಷ ಎಕ್ಸ್ ಪ್ರೆಸ್ ಸೇವೆಗಳನ್ನು ಜನವರಿ 31, 2025 ರವರೆಗೆ ವಿಸ್ತರಿಸಿದೆ.
ಈ ಸೇವೆಗಳನ್ನು ಈ ಹಿಂದೆ ಡಿಸೆಂಬರ್ 31, 2024 ರವರೆಗೆ ಓಡಿಸಲು ನಿರ್ಧರಿಸಲಾಗಿತ್ತು. ವಿಶೇಷ ರೈಲುಗಳು ತಮ್ಮ ಅಸ್ತಿತ್ವದಲ್ಲಿರುವ ಸಂಯೋಜನೆ, ಸಮಯ ಮತ್ತು ನಿಲುಗಡೆಗಳೊಂದಿಗೆ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ.
ಬೀರೂರು ನಿಲ್ದಾಣದಲ್ಲಿ ತಾತ್ಕಾಲಿಕ ರೈಲು ನಿಲುಗಡೆ ಮುಂದುವರಿಕೆ
ಬೀರೂರು ನಿಲ್ದಾಣದಲ್ಲಿ ರೈಲುಗಳಿಗೆ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.
ರೈಲು ಸಂಖ್ಯೆ 16587/16588 ಯಶವಂತಪುರ-ಬಿಕಾನೇರ್-ಯಶವಂತಪುರ ವಾರಕ್ಕೆರಡು ಬಾರಿ ಬೀರೂರು ನಿಲ್ದಾಣದಲ್ಲಿ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯ ಜನವರಿ 01 ರಿಂದ ಜೂನ್ 30, 2025 ರವರೆಗೆ ಇನ್ನೂ ಆರು ತಿಂಗಳ ಕಾಲ ಮುಂದುವರಿಯುತ್ತದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ