Cancer Hospital 2
Beereshwara 33
LaxmiTai 5

ಮೋದಿ ಸಂಪುಟದಲ್ಲಿ ರಾಜ್ಯಕ್ಕೆ 5-6 ಸ್ಥಾನ ಸಿಗುವ ನಿರೀಕ್ಷೆಯಿದೆ: ಬಿ ವೈ ವಿಜಯೇಂದ್ರ ವಿಶ್ವಾಸ

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಇಂದು ಸಾಯಂಕಾಲ  ಮೂರನೆ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಮೋದಿ ಅವರ ಕ್ಯಾಬಿನೆಟ್‍ನಲ್ಲಿ ರಾಜ್ಯಕ್ಕೆ 5 ರಿಂದ 6 ಸಚವಿ ಸ್ಥಾನಗಳು ಸಿಗುವ ನಿರೀಕ್ಷೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳ ಜೊತೆ  ಮಾತನಾಡಿದ ಅವರು, ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಆಗಬೇಕೆಂದು ನಿರ್ಧರಿಸಿದ್ದರು. ಮೋದಿ ನಾಯಕತ್ವಕ್ಕೆ ಜನಮನ್ನಣೆ ಸಿಕ್ಕಿದೆ. ರಾಜ್ಯದ ಮೈತ್ರಿ ಸಂಸದರಿಗೆ ಯಾರಿಗೆ ಸಚಿವ ಸ್ಥಾನ ಸಿಕ್ಕರೂ ಸಂತಸ. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ವಿಶ್ವಾಸ ಇದೆ. ರಾಘವೇಂದ್ರ ಮಂತ್ರಿ ಸ್ಥಾನಕ್ಕೆ ಅರ್ಹರು. ಪಕ್ಷ ಅಂತಿಮವಾಗಿ ನಿರ್ಧಾರ ತೆಗೆದುಕೊಳ್ಳಲಿದೆ. ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ

Emergency Service

ಇನ್ನೂ, ಪ್ರಧಾನಿ ಮೋದಿ ಕಚೇರಿಯಿಂದ ರಾಜ್ಯದ ಮೂವರಿಗೆ ಕರೆ ಬಂದಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಹೆಚ್.ಡಿ.ಕುಮಾರಸ್ವಾಮಿ ಜೊತೆ ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರಿಗೆ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ಧರಾಗುವಂತೆ ಕರೆ ಎಂದು ಹೇಳಿದ್ದಾರೆ.‌

Bottom Add3
Bottom Ad 2