ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಸಂಬಂಧ ಚರ್ಚೆ ನಡೆಯುತ್ತಿದ್ದು, ತಜ್ಞರ ಸಮಿತಿಯ ವರದಿ ತರಿಸಿಕೊಳ್ಳಲಾಗಿದೆ. ಇನ್ನು ಕೆಲವೇ ಹೊತ್ತಿನಲ್ಲಿ ತಜ್ಞರ ಮಧ್ಯಂತರ ವರದಿ ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಲಿದೆ.
ಕಲಿಕೆಯಿಂದ ಮಕ್ಕಳು ವಂಚಿತರಾಗಬಾರದು ಎನ್ನುವ ಕಾರಣಕ್ಕಾಗಿ ಶಾಲೆಗಳನ್ನು ಆರಂಭಿಸುವುಗದು ಅನಿವಾರ್ಯ ಎನ್ನುವ ತೀರ್ಮಾನಕ್ಕೆ ಸರಕಾರ ಬಂದಿದೆ. ಹಾಗಾಗಿ ಡಾ.ದೇವಿಪ್ರಸಾದ ಶೆಟ್ಟಿ ನೇತೃತ್ವದ ಸಮಿತಿಯಿಂದ ವರದಿ ಪಡೆದಿದೆ. ಈ ವರದಿಯ ಕುರಿತು ಇಂದು ಮಧ್ಯಾಹ್ನ ಸರಕಾರ ಪರಾಮರ್ಶೆ ನಡೆಸಲಿದೆ.
ತಜ್ಞರ ವರದಿ ಆಧರಿಸಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಚಿವರಾದ ಡಾ.ಸುಧಾಕರ ಮತ್ತು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಶಿಕ್ಷಣ ಸಚಿವ ಸುರೇಶ ಕುಮಾರ ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ತಜ್ಞರ ಜೊತೆಗೆ ಚರ್ಚೆ ನಡೆಸುವರು.
ತಜ್ಞರ ಸಲಹೆಗಳು
- ಹಂತಹಂತವಾಗಿ ಶಾಲೆಗಳನ್ನು ಆರಂಭಿಸಬೇಕು
- ಆರೋಗ್ಯವಂತ ಮಕ್ಕಳು ಮಾತ್ರ ಶಾಲೆಗೆ ಬರಬೇಕು
- ಮಕ್ಕಳ ಪಾಲಕರೇ ಮಕ್ಕಳನ್ನು ಕರೆತರಬೇಕು
- ಶಾಲೆಯಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳಬೇಕು
- ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಇರಬೇಕು
- ಮಕ್ಕಳು ಒಬ್ಬರ ವಸ್ತುವನ್ನು ಇನ್ನೊಬ್ಬರು ಬಳಸದಂತೆ ನೋಡಿಕೊಳ್ಳಬೇಕು
- ಶಾಲಾ ಶೌಚಾಲಯ ಸೇರಿದಂತೆ ಎಲ್ಲೆಡೆ ಸ್ವಚ್ಛತೆ ಇರುವಂತೆ ನೋಡಿಕೊಳ್ಳಬೇಕು
- ಶಿಕ್ಷಕರು ಮತ್ತು ಪಾಲಕರು ಲಸಿಕೆ ತೆಗೆದುಕೊಳ್ಳುವಂತೆ ನೋಡಿಕೊಳ್ಳುವುದು
- ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು ಇತ್ಯಾದಿ.
ಜುಲೈ 1ರಿಂದ ರಾಜ್ಯದಲ್ಲಿ ಶಾಲೆಗಳ ಆರಂಭ: ಹೊಸ ಕಾರ್ಯಸೂಚಿ ಬಿಡುಗಡೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ