
ಪ್ರಗತಿವಾಹಿನಿ ಸುದ್ದಿ: ಆಸ್ಪತ್ರೆಯ ಆಕ್ಸಿಜನ್ ಘಟಕದಲ್ಲಿ ಸ್ಫೋಟಗೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದಾಪುರದಲ್ಲಿ ಸಂಭವಿಸಿದೆ. ಭಾನುವಾರ ಮುಂಜಾನೆ ಈ ಘಟನೆ ಸಂಭವಿಸಿದ್ದು, ಸ್ಫೋಟದ ಸದ್ದು ಭಾರೀ ಪ್ರಮಾಣದಲ್ಲಿ ಕೇಳಿ ಬಂದಿದೆ.
ಘಟನೆಯಲ್ಲಿ ಜೀವಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಆಮ್ಲಜನಕದ ವಾಸನೆ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಅರ್ಧ ಕಿ.ಮೀ. ವ್ಯಾಪ್ತಿಗೆ ವ್ಯಾಪಿಸಿದ್ದು, ಜನರು ಹಾಗೂ ಆಸ್ಪತ್ರೆಯಲ್ಲಿರುವ ರೋಗಿಗಳು ಕೆಲವು ಗಂಟೆಗಳ ಕಾಲ ಆತಂಕದಲ್ಲಿದ್ದರು. ಘಟನೆ ನಡೆದ ಬೆನ್ನಲೇ ಆಸ್ಪತ್ರೆ ಸಿಬ್ಬಂದಿ ಆಸ್ಪತ್ರೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಫೋಟದ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಯ ವಿದ್ಯುತ್ ಪೂರೈಕೆ, ಜನರೇಟರ್ ಗಳನ್ನು ಬಂದ್ ಮಾಡಲಾಗಿದ್ದು, ಯಾವುದೇ ಅನಾಹುತ ಆಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ