*ಬೆಳಗಾವಿಯಿಂದ ತೆರಳಿದ ವಿಶ್ವಮಾನವ ಎಕ್ಸ್‌ಪ್ರೆಸ್ ರೈಲಿನಲ್ಲಿ ಸ್ಫೋಟ?*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯಿಂದ ಮೈಸೂರಿಗೆ ತೆರಳಿದ ವಿಶ್ವಮಾನವ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊಗೆ ಕಾಣಿಸಿ ಆತಂಕ ಮೂಡಿಸಿದೆ.
ರೈಲು ಪಾಂಡವಪುರ ಜಂಕ್ಷನ್ ತಲುಪುತ್ತಿದ್ದಂತೆ ಬೋಗಿಯ ಶೌಚಾಲಯದ ಬಳಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಪ್ರಯಾಣಿಕರು ರೈಲಿನ ಚೈನ್ ಎಳೆದಿದ್ದಾರೆ. ಈ ವೇಳೆ ಸಮಯಪ್ರಜ್ಞೆ ಮೆರೆದ ತ್ರಿನಾಥ್ ಎಂಬ ಯುವಕ ಬೆಂಕಿ ನಂದಿಸಿದ್ದಾನೆ. ರೈಲು ನಿಂತಿದ್ದೇ ತಡ ಜನ ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ.
ಸಂಜೆ ಸುಮಾರು 7:20 ಕ್ಕೆ ಈ ಘಟನೆ ಸಂಭವಿಸಿದ್ದು ಘಟನೆಯ ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ರೈಲ್ವೇ ಪೊಲೀಸರು ಹಾಗೂ ಶ್ವಾನದಳ ತಪಾಸಣೆ ಕೈಗೊಂಡಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲವಾದರೂ ಶಾರ್ಟ್ ಸರ್ಕ್ಯೂಟ್‌ನಿಂದ ಅನಾಹುತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೇ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸ್ಫೋಟ ಆಗಿಲ್ಲ, ಕೇವಲ ಹೊಗೆ ಕಾಣಿಸಿದೆ. ಅದಕ್ಕೆ ಕಾರಣವೇನು ಎನ್ನುವುದನ್ನು ಪರಿಶೀಲಿಸಲಾಗುತ್ತಿದೆ. ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ