ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸ್ಫೋಟಕ್ಕೂ ಪಾಕಿಸ್ತಾನಕ್ಕೂ ನಂಟಿರುವ ವಿಚಾರ ಈಗ ಚಾರ್ಜ್ ಶೀಟ್ ನಲ್ಲಿ ಬಯಲಾಗಿದೆ ಎನ್ನಲಾಗಿದೆ
ಬ್ಲಾಸ್ಟ್ ಸಂಬಂಧ ಈ ಹಿಂದೆಯೇ ಚಾರ್ಜ್‌ಶೀಟ್ ಸಲ್ಲಿಸಿದ್ದ ಎನ್‌ಐಎ ಇದೀಗ ಮತ್ತಷ್ಟು ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದೆ. ಸ್ಫೋಟಕ್ಕೂ ಪಾಕಿಸ್ತಾನಕ್ಕೂ ನಂಟಿರುವ ವಿಚಾರ ಈಗ ಬಯಲಾಗಿದೆ.
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಪಾಕಿಸ್ತಾನದ ನಂಟಿದ್ದು, ಪಾಕ್ ಮೂಲದ ಶಂಕಿತ ಉಗ್ರ ಎ6 ಫೈಸಲ್ ಸದ್ಯ ಪಾಕಿಸ್ತಾನದಲ್ಲಿದ್ದಾನೆ ಎನ್ನಲಾಗಿದೆ. ಮಂಗಳೂರು ಕುಕ್ಕರ್ ಸ್ಪೋಟದ ಬಳಿಕ ತಾಹಾ ಮತ್ತು ಶಾಜಿದ್ ನಾಪತ್ತೆಯಾಗಿದ್ದರು. ಕೆಲಕಾಲದ ಬಳಿಕ ಮತ್ತೆ ವಾಪಾಸ್ ಬೆಂಗಳೂರಿಗೆ ಬಂದಿದ್ದರು. ಆಗ ಮುಜಾಮಿಲ್ ಷರೀಫ್ ಜೊತೆಗೆ ಪರಿಚಯವಾಗಿತ್ತು. ಮುಜಾಮಿಲ್ ಮೆಜೆಸ್ಟಿಕ್ ಬಳಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇದೇ ಮುಜಾಮಿಲ್ ಷರೀಫ್‌ನ ತಾಹಾ ಮತ್ತು ಶಾಜಿದ್ ಮನಪರಿವರ್ತಿಸಿ ಐಸಿಸ್‌ಗೆ ಸೇರ್ಪಡೆ ಮಾಡಿದ್ದರು. ಮೊದಲ ಹಂತದಲ್ಲಿ ಕೆಲವು ದುಷ್ಕೃತ್ಯ ನಡೆಸಲು ಮುಜಾಮಿಲ್‌ಗೆ ತಾಹಾ ಮತ್ತು ಶಾಜಿದ್ ಟಾಸ್ಕ್ ನೀಡಿದ್ದರು.
ಫೆಬ್ರವರಿ 29ರಂದು ಶಾಜಿದ್ ಚೆನ್ನೈನಿಂದ ಬೆಂಗಳೂರಿಗೆ ಬಂದು ಕೆಆರ್ ಪುರಂ ಟಿನ್ ಫ್ಯಾಕ್ಟರಿ ಬಳಿ ಇಳಿದು, ಕುಂದಲಹಳ್ಳಿಗೆ ಬಂದು ರಾಮೇಶ್ವರಂ ಕೆಫೆಯಲ್ಲಿ ಐಇಡಿ ಬಾಂಬ್ ಇಟ್ಟಿದ್ದರ ಬಗ್ಗೆ ಎನ್‌ಐಎ ಎಳೆ ಎಳೆಯಾಗಿ ಚಾರ್ಜ್ ಶೀಟ್‌ನಲ್ಲಿ ಮಾಹಿತಿ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ