National

*ಎಕ್ಸ್ ಪ್ರೆಸ್ ವೇಯಲ್ಲಿ ಮಹಿಳೆಯೊಂದಿಗೆ ಆಕ್ಷೇಪಾರ್ಹ ರೀತಿಯಲ್ಲಿ ವರ್ತನೆ: ಬಿಜೆಪಿ ಮುಖಂಡನ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡನೊಬ್ಬ ಎಕ್ಸ್ ಪ್ರೆಸ್ ವೇಯಲ್ಲಿಯೇ ಮಹಿಳೆಯೊಂದಿಗೆ ಆಕ್ಷೇಪಾರ್ಹ ರೀತಿಯಲ್ಲಿ ಕಾಣಿಸಿಕೊಂಡಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ.

ಬಿಜೆಪಿ ನಾಯಕರ್ ಮನೋಹರ್ ಲಾಲ್ ಧಾಕಡ್ ಮಧ್ಯಪ್ರದೇಶದ ಮಂದಸೌರ್ ನ ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇಯಲ್ಲಿ ಮಹಿಳೆಯೊಂದಿಗೆ ಅಸಭ್ಯ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ನಡುರಸ್ತೆಯಲ್ಲಿಯೇ ಕಾರು ನಿಲ್ಲಿಸಿ ಮಹಿಳೆಯೊಂದಿಗೆ ಆಕ್ಷೇಪಾರ್ಹರೀತಿಯಲ್ಲಿ ಕಾಣಿಸಿಕೊಂಡಿದ್ದು, ಸಿಸಿಟಿವಿಯಲ್ಲಿ ಈ ಘಟನೆ ಸೆರೆಯಾಗಿದೆ.

ವರದಿಗಳ ಪ್ರಕಾರ ಧಾಕಡ್ ಉಜ್ಜಯನಿಯಲ್ಲಿ ಸಂಸ್ಥೆಯಾದ ಧಾಕಡ್ ಮಹಾಸಭಾದ ಕಾರ್ಯದರ್ಶಿ ಹಾಗೂ ಅವರ ಪತ್ನಿ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಮನೋಹರ್ ಲಾಲ್ ಧಾಕಡ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button