
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕರ್ನಾಟಕ ರಕ್ಷಣಾ ವೇದಿಕೆಯಿಂದ ನಾಲ್ವರನ್ನು ಉಚ್ಛಾಟಿಸಿ ಅಧ್ಯಕ್ಷ ಟೆ.ಎ.ನಾರಾಯಣ ಗೌಡ ಆದೇಶ ಹೊರಡಿಸಿದ್ದಾರೆ.
ಓರ್ವ ಜಿಲ್ಲಾ ಸಂಚಾಲಕ ಹಾಗೂ ಮೂವರು ತಾಲೂಕು ಅಧ್ಯಕ್ಷರನ್ನು ಉಚ್ಛಾಟನೆ ಮಾಡಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಘಟಕದ ಆದೇಶಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಉಚ್ಛಾಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲಾ ಸಂಚಾಲಕರಾದ ಶಿವಾನಂದ ಕೋಲಕಾರ, ಬೈಲಹೊಂಗಲ ತಾಲ್ಲೂಕು ಅಧ್ಯಕ್ಷರಾದ ರಾಜು ಬೋಳಣ್ಣವರ, ಸವದತ್ತಿ ತಾಲ್ಲೂಕು ಅಧ್ಯಕ್ಷರಾದ ಉದಯ ಚಿಕ್ಕಣ್ಣವರ, ಹಾಗೂ ಚಿಕ್ಕೋಡಿ ತಾಲ್ಲೂಕು ಅಧ್ಯಕ್ಷರಾದ ನಾಗೇಶ ಮಾಳಿ ಉಚ್ಛಾಟನೆಗೊಂಡವರು.
ಇವರುಗಳ ವಿಚಾರವಾಗಿ ಬೆಳಗಾವಿ ಜಿಲ್ಲಾ ಸಮಿತಿಯು ನೀಡಿರುವ ವರದಿಯನ್ನು ಪರಿಗಣಿಸಿ ಇವರುಗಳನ್ನು ಸಂಘಟನೆಯಿಂದ ಉಚ್ಛಾಟಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ