*IAS,KAS ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್ ಹಾಗೂ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.
ಆಸಕ್ತ ವಿದ್ಯಾರ್ಥಿಗಳು http://sevasindhu.karnataka.gov.in/sevasindhu/ Departmentservices ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಸೆ.20 ರವರೆಗೆ ವಿಸ್ತರಿಸಲಾಗಿರುತ್ತದೆ. ಆದ್ದರಿಂದ ಆಸಕ್ತಿಯುಳ್ಳ ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್‌ಲೈನ್ ಮುಖಾಂತರ GBE ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ www.dom.karnataka.gov.in ಅಥವಾ ದೂರವಾಣಿ: 8277799990 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ