Kannada NewsKarnataka NewsNational
*ಉತ್ತರ ಕನ್ನಡದ 9 ಸ್ಥಳಗಳಲ್ಲಿ ಅತೀ ಹೆಚ್ಚು ಉಷ್ಣಾಂಶ*: *ಮನೆಯಿಂದ ಹೊರ ಬರದಂತೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ. ಈ ಫೆಬ್ರವರಿಯಲ್ಲೇ ರಾಜ್ಯದಲ್ಲಿ ಭಾರಿ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಮುಂದಿನ ಮೂರು ದಿನಗಳ ಕಾಲ ಬಿಸಿ ಗಾಳಿ ಬೀಸಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ 9 ಸ್ಥಳಗಳಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಸಾವಂತವಾಡಿಯಲ್ಲಿ 41.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ಜಿಲ್ಲೆಯ ಜನರು ಮೂರು ದಿನಗಳ ಕಾಲ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು. ಮಧ್ಯಾಹ್ನದ ವೇಳೆ ಮನೆಯಿಂದ ಹೊರಹೋಗಬೇಡಿ ಎಂದು ಮನವಿ ಮಾಡಿದ್ದಾರೆ. ಬಿಸಿಲ ಝಳ ಅಥವಾ ಯಾವುದೇ ಸಮಸ್ಯೆ ಉಂಟಾದಲ್ಲಿ 1077 ಸಂಖ್ಯೆಗೆ ಕರೆ ಮಾಡಿ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ