Belagavi NewsBelgaum NewsKannada NewsKarnataka NewsNational

*ಹವಾಮಾನ ವೈಪರೀತ್ಯ: 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್*

ಪ್ರಗತಿವಾಹಿನಿ ಸುದ್ದಿ : ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಸೇರಿದಂತೆ ಒಟ್ಟು 5 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಇತ್ತ ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲೂ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಸಾರ್ವಜನಿಕರು ಹಾಗೂ ನದಿ ತೀರದ ನಿವಾಸಿಗಳು ಎಚ್ಚರಿಕೆಯಿಂದಿರಲು ಇಲಾಖೆ ಸೂಚಿಸಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರು, ಮಂಡ್ಯ ರಾಮನಗರ ಹಾಗೂ ತುಮಕೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಿಡಿಲು ಹಾಗೂ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button