Kannada NewsKarnataka NewsLatest

*ಆಟವಾಡುವಾಗ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು*

ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ತೊಗರಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸವಿತಾ ಹಾಗೂ ಮುನಿರಾಜು ದಂಪತಿಯ ಮಗಳು ದಕ್ಷ (11) ಹಾಗೂ ಆಶಾ- ಪ್ರದೀಪ್ ದಂಪತಿಯ ಮಗ ಧನುಷ್ (4) ಮೃತ ಮಕ್ಕಳು.

ಇಬ್ಬರು ಕೃಷಿ ಹೊಂಡದ ಬಳಿ ಆಟವಾಡಲು ತೆರಳಿದ್ದರು. ಈ ವೇಳೆ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ಸೂಕ್ತ ಬೇಲಿ ನಿರ್ಮಿಸದ ಕಾರಣ ಮಾಲೀಕ ಗುರುಮೂರ್ತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button