*ಕಬ್ಬಿಗೆ ನ್ಯಾಯಯುತ ಬೆಲೆ ಸಿಗುವವರೆಗೂ ಕಾರ್ಖಾನೆ ಆರಂಭಿಸಲ್ಲ*; ರೈತರ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿ ಸೂಕ್ತ ದರ ನಿಗದಿಪಡಿಸುವವರೆಗೂ ಸಕ್ಕರೆ ಕಾರ್ಖಾನೆಗಳ ಕಾರ್ಯಾರಂಭಕ್ಕೆ ಅವಕಾಶ ನೀಡುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.  ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಅಕ್ಟೋಬರ್ 17ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಲು ರೈತ ಮುಖಂಡರು ನಿರ್ಧರಿಸಿದ್ದಾರೆ. ಗುರ್ಲಾಪುರ ರೈತ ಹೋರಾಟ ವೇದಿಕೆಯಲ್ಲಿ ಮಾತನಾಡಿದ ರೈತ ಸಂಘದ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ, ಕಬ್ಬಿನ ನ್ಯಾಯಯುತ ಬೆಲೆ ಘೋಷಣೆಯಾಗುವವರೆಗೂ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.  ಕಳೆದ … Continue reading *ಕಬ್ಬಿಗೆ ನ್ಯಾಯಯುತ ಬೆಲೆ ಸಿಗುವವರೆಗೂ ಕಾರ್ಖಾನೆ ಆರಂಭಿಸಲ್ಲ*; ರೈತರ ಎಚ್ಚರಿಕೆ*