LatestNational

*ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ: 10 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 10 ಜನರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಇಲ್ಲಿನ ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂ ನಲ್ಲಿ ಸಿಚಾರ್ ನ ಕೆಮಿಕಲ್ ಕಂಪನಿಯಲ್ಲಿ ಬೆಂಕಿ ಅವಘಡ ಸಂಭವಿಸಿ, ಸ್ಫೋಟಗೊಂಡಿದೆ. ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯುಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button