
ಪ್ರಗತಿವಾಹಿನಿ ಸುದ್ದಿ: ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ದೆಹಲಿಯ ರಿಥಲಾದಲ್ಲಿ ರೋಹಿಣಿ ಸೆಕ್ಟರ್ ಪ್ರದೇಶದಲ್ಲಿ ಕೆಮಿಕಲ್ ಫ್ಯಾಕ್ಟರಿ ವೊಂದರಲ್ಲಿ ಈ ದುರಂತ ಸಂಭವಿಸಿದೆ. ನೋಡ ನೋಡುತ್ತಿದ್ದಂತೆ ಫ್ಯಾಕ್ಟರಿ ತುಂಬೆಲ್ಲಾ ಬೆಂಕಿ ಆವರಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಕೆಲವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
16 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




