Kannada NewsKarnataka NewsLatest

ವಿಟಿಯುದಲ್ಲಿ ಫ್ಯಾಕಲ್ಟಿ ಡೆವಲಪ್ ಮೆಂಟ್ ಪ್ರೋಗ್ರಾಂ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹಾಗೂ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಸಂಯುಕ್ತ ಆಶ್ರಯದಲ್ಲಿ  (ಎಐಸಿಟಿಇ) ಮೂರು ದಿನಗಳ ದಿನಗಳ ಪ್ಯಾಕಲ್ಟಿ ಡೆವಲಫ್‌ಮೆಂಟ್ ಆನ್ ಸ್ಟುಡೆಂಟ್ ಇಂಡಕ್ಷನ್ ಪ್ರೊಗ್ರಾಂ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನಾ ಸಮಾರಂಭ  ಇಂದು ನಡೆಯಿತು. ಎಐಸಿಟಿಇ ಸಂಪನ್ಮೂಲ ವ್ಯಕ್ತಿ ಸಂಜೀವ್ ಚೋಪ್ರಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಮಾನವೀಯ ಮೌಲ್ಯಗಳು ಮಹತ್ವದ ಪಾತ್ರ ವಹಿಸುತ್ತವೆ. ಆದ್ದರಿಂದ ಅಧ್ಯಾಪಕರು ವಿದ್ಯಾರ್ಥಿಗಳ ನಿರೀಕ್ಷೆಗಳನ್ನು ಈಡೇರಿಸುವ ದೃಷ್ಟಿಕೋನದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಡಾ.ಕರಿಸಿದ್ದಪ್ಪ ಅವರು ಮಾತನಾಡಿ, ರಾಷ್ಟ್ರ ನಿರ್ಮಾಣ ಪ್ರಕ್ರಿಯೆಯಲ್ಲಿ ಅಧ್ಯಾಪಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಆದ್ದರಿಂದ ಅಧ್ಯಾಪಕರು ಭೋದನಾ ಕೌಶಲ್ಯಗಳನ್ನು ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು

ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರು ಹಾಗೂ ಪ್ರಭಾರಿ ಕುಲಸಚಿವ  ಡಾ ಸತೀಶ ಅಣ್ಣಿಗೇರಿ ಉಪಸ್ಥಿತರಿದ್ದರು. ಬೆಳಗಾವಿ ಪ್ರಾದೇಶಿಕ ಕಚೇರಿ ನಿರ್ದೇಶಕ ಡಾ. ಎ. ವಿ. ಶಿವಾಪುರ ಸ್ವಾಗತಿಸಿದರು. ಡಾ. ಬಸವರಾಜ ಕುಡಚಿಮಠ ವಂದಿಸಿದರು.  ಪ್ರಾಧ್ಯಾಪಕ  ಡಾ. ಚಿಕ್ಕಣ್ಣ ಕಾರ್ಯಕ್ರಮದ ಬಗ್ಗೆ ವಿವರಿಸಿದರು. ಕರ್ನಾಟಕ, ಕೆರಳ, ತಮಿಳನಾಡು ರಾಜ್ಯಗಳಿಂದ ಅಂದಾಜು ೧೨೦ ಪ್ರಾಧ್ಯಾಪಕರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button