Latest

ನಕಲಿ ಆಯುರ್ವೇದ ವೈದ್ಯ ಸೇರಿ ಮೂವರ ಬಂಧನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಸ್ತೆ ಪಕ್ಕದಲ್ಲಿ ಶೆಡ್‌ ಹಾಕಿಕೊಂಡು ಆಯುರ್ವೇದ ಚಿಕಿತ್ಸೆ ನೀಡುವುದಾಗಿ ಹೇಳಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ನಕಲಿ ವೈದ್ಯ ಸೇರಿ ಮೂವರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನದ ಮೊಹಮ್ಮದ್ ಸಮೀನ್ ಅಲಿಯಾಸ್ ಡಾ. ಮಲ್ಲಿಕ್ (50), ಮೊಹಮ್ಮದ್ ರಹೀಸ್ (55) ಹಾಗೂ ಶೈಫ್ ಅಲಿ (25) ಬಂಧಿತರು.

ಆರೋಪಿಗಳಿಂದ 4 ಕಾರು, 3 ಬೈಕ್‌ ಹಾಗೂ 3.5 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.

ಜೈನ ದೇವಾಲಯಗಳ ಬಳಿ ನಿಲ್ಲುತ್ತಿದ್ದ ಆರೋಪಿಗಳು, ದೇವಾಲಯಕ್ಕೆ ಬರುವ ವಿಶೇಷಚೇತನ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಚಿಕಿತ್ಸೆ ನೀಡುವ ನೆಪದಲ್ಲಿ ವಂಚಿಸುತ್ತಿದ್ದರು ಎನ್ನಲಾಗಿದೆ.

ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಮಹಿಳೆ ಹೊಟ್ಟೆಯಲ್ಲಿ ಟವೆಲ್ ಬಿಟ್ಟ ವೈದ್ಯ!

https://pragati.taskdun.com/the-doctor-left-a-towel-in-the-womans-stomach/

*ಬೆಳಗಾವಿಯಲ್ಲಿ ಖತರ್ನಾಕ್ ಬೈಕ್ ಕಳ್ಳರ ಬಂಧನ*

https://pragati.taskdun.com/bike-thieves-arrested-in-belagavi/

ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿ; ಸಿಎಂ ಬೊಮ್ಮಾಯಿ ಹೇಳಿದ್ದೇನು?

https://pragati.taskdun.com/enactment-of-love-jihad-prohibition-act-what-did-cm-bommai-say/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button