ಪ್ರಗತಿವಾಹಿನಿ ಸುದ್ದಿ; ಲಕ್ನೌ: ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ 18 ಪೊಲೀಸರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ.
ಬರೋಬ್ಬರಿ 18 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣ. ನಕಲಿ ಎನ್ ಕೌಂಟರ್ ನಲ್ಲಿ ಜಲಾಲಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಚಚುಪುರದ ಇಬ್ಬರನ್ನು ಹತ್ಯೆಗೈಯ್ಯಲಾಗಿತ್ತು. ಇದೀಗ ಈ ಪ್ರಕರಣ ಸಂಬಂಧ ಶಹಜಾನ್ ಪುರ ಕೋರ್ಟ್ ನೀಡಿದ ಆದೇಶದ ಮೇರೆಗೆ ಎಸ್ ಪಿ ಸೇರಿದಂತೆ ಜಲಾಲಾಬಾದ್ ನಲ್ಲಿ 18 ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
2004 ಅಕ್ಟೋಬರ್ 3ರಂದು ಚಚುಪುರ ಗ್ರಾಮದ ನಿವಾಸಿಗಳಾದ ಪ್ರಹ್ಲಾದ್ ಹಾಗೂ ಧನಪಾಲ್ ಎಂಬುವವರನ್ನು ನಕಲಿ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಪ್ರಹ್ಲಾದ್ ಸಹೋದರ ರಾಮ ಕೀರ್ತಿ ದೂರು ನೀಡಿದ್ದರು. ಆದರೆ ಪ್ರಕರಣ ದಾಖಲಾಗದ ಹಿನ್ನೆಲೆಯಲ್ಲಿ 2012ರಲ್ಲಿ ಪೊಲೀಸರ ವಿರುದ್ಧ ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಅಂದಿನ ಎಸ್‌ಪಿ ಸುಶೀಲ್ ಕುಮಾರ್, ಹೆಚ್ಚುವರಿ ಎಸ್‌ಪಿ ಮಾತಾ ಪ್ರಸಾದ್, ಮುಮ್ಮು ಲಾಲ್, ಜೈಕರನ್ ಸಿಂಗ್ ಭದೌರಿಯಾ, ಆರ್.ಕೆ.ಸಿಂಗ್ ಸೇರಿದಂತೆ 18 ಪೊಲೀಸರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಆದೇಶ ನೀಡಿದೆ.
ಶಾಸಕ ಜಮೀರ್ ಅಹ್ಮದ್ ವಿರುದ್ಧ FIR ದಾಖಲು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ