Belagavi NewsBelgaum NewsKarnataka News

*ಬೆಳಗಾವಿ ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ ಬುಕ್!*

ಪ್ರಗತಿವಾಹಿನಿ ಸುದ್ದಿ: ಕಿಡುಗೇಡಿಗಳು ಬೆಳಗಾವಿ ಪೊಲೀಸ್ ಕಮಿಷನರ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದಾರೆ. ಈ ಬಗ್ಗೆ ಕಮಿಷನರ್ ಭೂಷಣ್ ಗುಲಾಬರಾವ್ ದೂರು ದಾಖಲಿಸಿದ್ದು, ಎಫ್ ಐ ಆರ್ ದಾಖಲಾಗಿದೆ.

Related Articles

ಭೂಷಣ್ ಗುಲಾಬರಾವ್ ಹೆಸರಿನ ನಕಲಿ ಖಾತೆಯನ್ನು ಕಿಡಿಗೇಡಿಗಳು ತೆರೆದಿದ್ದಾರೆ. ನಕಲಿ ಫೇಸ್ ಬುಕ್ ಖಾತೆ ಮುಚ್ಚಲು ಕೆಲ ಸಮಯಗಳು ಬೇಕಾಗುತ್ತದೆ. ನಕಲಿ ಫೇಸ್ ಬುಕ್ ಖಾತೆ ಹೆಸರಲ್ಲಿನಲ್ಲಿ ಬರುವ ಯಾವುದೇ ಸಂದೇಶವನ್ನು ಸ್ವೀಕರಿಸದಂತೆ ಸಾರ್ವಜನಿಕರಲ್ಲಿ ಕಮಿಷನರ್ ಮನವಿ ಮಾಡಿದ್ದಾರೆ.

ನಾನು ಬೆಳಗಾವಿ ನಗರ ಪೊಲೀಸ್ ಆಯುಕ್ತರ ಸಾಮಾಜಿಕ ಜಾಲತಾಣಗಳನ್ನು ಮಾತ್ರ ಉಪಯೋಗಿಸುತ್ತಿದ್ದು, ಬೇರಾವುದೇ ವೈಯಕ್ತಿಕ ಹೆಸರಿನಲ್ಲಿ ಫೇಸ್ ಬುಕ್ ಖಾತೆ ಅಥವಾ ಸೋಷಿಯಲ್ ಮೀಡಿಯಾ ಖಾತೆ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Home add -Advt

Related Articles

Back to top button