Latest

ನಕಲಿ ಐಎಎಸ್ ಅಧಿಕಾರಿ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಾನು ಐಎಎಸ್ ಅಧಿಕಾರಿ ಎಂದು ಹೇಳಿಕೊಂಡು ಪೊಲೀಸರಿಗೆ ಸುಳ್ಳು ಹೇಳಿ ಬಳಿಕ ಆರ್ಟ್ ಆಫ್ ಲೀವಿಂಗ್ ನ ರವಿಶಂಕರ್ ಗುರೂಜಿ ಆಶ್ರಮಕ್ಕೂ ಭೇಟಿ ನೀಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ರವಿಶಂಕರ್ ಗುರೂಜಿ ಆಶ್ರಮದ ಜಮೀನು ವಿವಾದ ಪ್ರಕರಣ ಬಗೆಹರಿಸುವುದಾಗಿ ಹೇಳಿಕೊಂಡಿದ್ದ ನಕಲಿ ಐಎಎಸ್ ಅಧಿಕಾರಿ ಶಶಿರ್, ಗುರೂಜಿ ಪರ ಬ್ಯಾಟಿಂಗ್ ಮಾಡಿದ್ದ. ಪೊಲೀಸರಿಗೂ ತಾನು ಐಎಎಸ್ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ.

ಮೂಲತ: ಮಹಾರಾಷ್ಟ್ರದವನಾದ ಶಶಿರ್, ಕಳೆದ ಮೂರು ವರ್ಷಗಳಿಂದ ಕಗ್ಗಲಿಪುರದಲ್ಲಿ ವಾಸವಾಗಿದ್ದ. ಅನುಮಾನಗೊಂಡ ಪೊಲೀಸರು ಶಶಿರ್ ನನ್ನು ತೀವ್ರ ವಿಚಾರಣೆ ನಡೆಸಿದಾಗ ತಾನು ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದು, ಐಎ ಎಸ್ ಅಧಿಕಾರಿ ಎಂದು ಸುಳ್ಳು ಹೇಳಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಡ್ರಗ್ಸ್ ಪ್ರಕರಣ; ಆಂಕರ್ ಅನುಶ್ರೀ ಕುರಿತು ಸ್ಫೋಟಕ ಮಾಹಿತಿ ಬಹಿರಂಗ

Home add -Advt

Related Articles

Back to top button