Belagavi NewsBelgaum NewsKannada NewsKarnataka NewsNationalPolitics

*ನಾಲ್ವರ ಮೃತ ದೇಹ ಸಂಜೆ ಬೆಳಗಾವಿಗೆ: ಡಿಸಿ ಹೇಳಿದ್ದೇನು..‌?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತದ ದುರ್ಘಟನೆಯಲ್ಲಿ ಬೆಳಗಾವಿಯ ನಾಲ್ವರು ಸಾವನ್ನಪ್ಪಿದ್ದು, ಮೃತ ದೇಹಗಳು ಬೆಳಗಾವಿಗೆ ಬರುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಮಾಹಿತಿ ನೀಡಿದ್ದಾರೆ.‌

ಇಂದು ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಂಭ ಮೇಳದಲ್ಲಿ ಸಾವನ್ನಪ್ಪಿದ ಬೆಳಗಾವಿಯ ನಾಲ್ವರ ಮೃತ ದೇಹ ಆಂಬ್ಯುಲೆನ್ಸ್ ಮೂಲಕ ದೆಹಲಿಗೆ ಶಿಫ್ಟ್ ಮಾಡಿದ್ದೇವೆ. ಕರ್ನಾಟಕ ಭವನದ ಮೂಲಕ ಮರಣೋತ್ತರ ಪರೀಕ್ಷೆ ಸಿದ್ಧತೆ ಮಾಡಲಾಗಿದೆ. ದೆಹಲಿಯಿಂದ 3.30ಕ್ಕೆ ಪ್ಲೈಟ್ ಇದ್ದು, ಮೃತ ದೇಹಗಳು 5.30ಕ್ಕೆ ಬೆಳಗಾವಿಗೆ ಆಗಮಿಸಲಿವೆ ಎಂದು ತಿಳಿಸಿದರು. 

ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಕರೆ ನನ್ನ ಜೊತೆ ಮಾತನಾಡಿದ್ದಾರೆ. ಜಿಲ್ಲಾಡಳಿತದಿಂದಲೇ ಸಿದ್ಧತೆ ಮಾಡಿಕೊಳ್ಳಲು ತಿಳಿಸಿದ್ದಾರೆ. ಜತೆಗೆ ಮೃತರ ಕುಟುಂಬಗಳಿಗೆ ಪರಿಹಾರದ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ. ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಪರಿಹಾರ ಘೋಷಣೆ ಮಾಡಬಹುದು ಎಂದರು. 

ಮೃತ ನಾಲ್ವರ ಮರಣೋತ್ತರ ಪರೀಕ್ಷೆ ನಡೆದಿಲ್ಲ. ಪ್ರಯಾಗ್ ರಾಜ್ ನಲ್ಲಿ ಬಹಳಷ್ಟು ಸಮಸ್ಯೆ ಆಗಿದ್ದರಿಂದ ಮರಣೋತ್ತರ ಪರೀಕ್ಷ ನಡೆಸಿಲ್ಲ. ದೆಹಲಿಯಲ್ಲಿ ಮರಣೋತ್ತರ ಪರೀಕ್ಷೆಗೆ ಮನವಿ ಮಾಡಿದ್ದೇವೆ.‌ ಸಮಯದ ಅಭಾವದಿಂದ ಮರಣೋತ್ತರ ಪರೀಕ್ಷೆ ರದ್ದಾದರೆ ಬೆಳಗಾವಿಯಲ್ಲಿಯೇ ಮರಣೋತ್ತರ ಪರೀಕ್ಷೆ ಮಾಡಿಕೊಳ್ಳಲು ಸಿದ್ಧತೆ ಮಾಡಿದ್ದೇವೆ ಎಂದು‌ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. 

Home add -Advt

Related Articles

Back to top button