Kannada NewsKarnataka NewsLatest

*ನಕಲಿ ಐಟಿಸಿ ಜಾಲ ಪತ್ತೆ: ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಬರೋಬ್ಬರಿ 2,000 ಕೋಟಿ ರೂಪಾಯಿ ಮೊತ್ತದ ನಕಲಿ ಐಟಿಸಿ (ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್) ವಂಚನೆ ಜಾಲವನ್ನು ವಾಣಿಜ್ಯ ತೆರುಗೆ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದು, ಪ್ರಕರಣ ಸಂಬಂಧ 7 ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಇದೀಗ ಇದೇ ಪ್ರಕರಣದ ತನಿಖೆಯ ಭಾಗವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಅವರ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ನೀಡಲಾಗಿದೆ.

ನಕಲಿ ಬಿಲ್‌ಗಳ ಸಾಗಾಟಕ್ಕೆ ನ್ಯಾಷನಲ್ ಟ್ರಾವೆಲ್ಸ್‌ನ ಲಾರಿಗಳನ್ನು ಬಳಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

Home add -Advt

ಏನಿದು ನಕಲಿ ಐಟಿಸಿ ಪ್ರಕರಣ? ಎಂಬುದನ್ನು ನೋಡುವುದಾದರೆ ಮಹಾರಾಷ್ಟ್ರದ ಗುಜರಿ ವಸ್ತುಗಳ ದಲ್ಲಾಳಿಗಳು ತೆರಿಗೆ ವಂಚಿಸುವ ಸಲುವಾಗಿ ಕರ್ನಾಟಕದಿಂದ ಗುಜರಿ ವಸ್ತುಗಳನ್ನು ಆಮದು ಮಾಡಿಕೊಳ್ಳುತ್ತಿರುವಂತೆ ನಕಲಿ ಕಂಪನಿಗಳ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸುತ್ತಿದ್ದರು. ‘ಟಂಗ್‌ಸ್ಟನ್ ಕಾರ್ಬೈಡ್ ಸ್ಕ್ರ್ಯಾಪ್’ ಹೆಸರಿನಲ್ಲಿ ಈ ದಂಧೆ ನಡೆಯುತ್ತಿತ್ತು. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹೋಗುವ ವಾಹನಗಳನ್ನು ಇದಕ್ಕಾಗಿ ಬಳಸಲಾಗುತ್ತಿತ್ತು.

ನ್ಯಾಷನಲ್ ಟ್ರಾವೆಲ್ಸ್ ಗುತ್ತಿಗೆ ಪಡೆದಿದ್ದ ಲಾರಿಗಳೂ ಸೇರಿದಂತೆ ತಿಂಗಳಿಗೆ ಸುಮಾರು 20-25 ಭಾರಿ ಸರಕು ಸಾಗಣೆ ವಾಹನಗಳಲ್ಲಿ ಸ್ಕ್ರ್ಯಾಪ್ ರವಾನೆಯಾಗುತ್ತಿದೆ ಎಂದು ಸುಳ್ಳು ಇ-ವೇ ಬಿಲ್ ಸೃಷ್ಟಿಸಲಾಗುತ್ತಿತ್ತು. ಆದರೆ ಈ ವಾಹನಗಳಲ್ಲಿ ಯಾವುದೇ ಗುಜರಿ ವಸ್ತುಗಳೇ ಇರುತ್ತಿರಲಿಲ್ಲ. ಕೇವಲ ನಕಲಿ ಬಿಲ್‌ಗಳು ಮಾತ್ರ ಹಂತ ಹಂತವಾಗಿ ಹಸ್ತಾಂತರಗೊಂಡು ಮಹಾರಾಷ್ಟ್ರ ತಲುಪುತ್ತಿದ್ದವು.

ಬೆಂಗಳೂರಿನಲ್ಲಿ ಟಂಗ್‌ಸ್ಟನ್ ಸ್ಕ್ರ್ಯಾಪ್ ಅಷ್ಟಾಗಿ ಸಿಗದೇ ಇದ್ದರೂ, ಇಲ್ಲಿಂದ ದೊಡ್ಡ ಪ್ರಮಾಣದಲ್ಲಿ ರಫ್ತಾಗಿರುವ ದಾಖಲೆಗಳು ಸೃಷ್ಟಿಯಾಗಿದ್ದವು. ಸುಮಾರು 217 ಕೋಟಿ ರೂ. ವಹಿವಾಟು ನಡೆಸಿ, 39 ಕೋಟಿ ರೂ. ತೆರಿಗೆ ಬಿಲ್ ಸೃಷ್ಟಿಸಲಾಗಿತ್ತು. ಇದರಿಂದ ಅನುಮಾನಗೊಂಡ ವಾಣಿಜ್ಯ ತೆರಿಗೆ ಅಧಿಕಾರಿಗಳು ತನಿಖೆ ನಡೆಸಿದಾಗ ಬೃಹತ್ ವಂಚನೆ ಜಾಲ ಪತ್ತೆಯಾಗಿದೆ.


Related Articles

Back to top button