Karnataka NewsLatest

*ಯುವತಿ ಮೇಲೆ ಅತ್ಯಾಚಾರ: ಕಾಮುಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಆಡುಗೋಡಿ ನಿವಾಸಿ ಮುಕೇಶ್ವರ್ ಎಂದು ಗುರುತಿಸಲಾಗಿದೆ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಪೊಲೀಸರು ಆತನ ಮನೆಯಲ್ಲಿಯೇ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ.

Home add -Advt

ಶನಿವಾರ ರಾತ್ರಿ ಕೋರಮಂಗಲದ ಪಬ್ ನಿಂದ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದ ಖಾಸಗಿ ಕಾಲೇಜು ವಿದ್ಯಾರ್ಥಿನಿ ಬೈಕ್ ಕೆಟ್ಟು ಹೋಗಿತ್ತು. ಈ ವೇಳೆ ಡ್ರಾಪ್ ಕೊಡುವುದಾಗಿ ಹೇಳಿ ಯುವಕನೊಬ್ಬ ವಿದ್ಯಾರ್ಥಿಯನ್ನು ಕರೆದೊಯ್ದು, ಆಕೆಯನ್ನು ನಿರ್ಜನ ಪ್ರದೇಶದ ಶೆಡ್ ಬಳಿ ಎಳೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ವಿದಾರ್ಥಿನಿ ತನ್ನ ಮೊಬೈಲ್ ನಿಂದ ಎಮರ್ಜೆನ್ಸಿ ಕಾಲ್ ಮಾಡಿದ್ದು ಆಕೆಯ ಸ್ನೇಹಿತರು ಸ್ಥಳಕ್ಕಾಗಮಿಸುವಷ್ಟರಲ್ಲಿ ಆರೋಪಿ ಎಸ್ಕೇಪ್ ಆಗಿದ್ದ. ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.

Related Articles

Back to top button