Election NewsKannada NewsKarnataka NewsPolitics

ಫೇಕ್‌ ಸುದ್ದಿ : ಸಿಎಂ ಕಂಪ್ಲೇಂಟ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬಿಜೆಪಿ – ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿ, ಅದರಲ್ಲಿ ಜನರ ಕೋಮುಭಾವನೆ ಕೆರಳಿಸುವ ಸುದ್ದಿಯನ್ನು ತುಂಬಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಇಲಾಖೆಗೆ ದೂರು ನೀಡಿದ್ದಾರೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾರು ಎಂಬ ಬಗ್ಗೆ ನಮಗೆ ಮಾಹಿತಿ ಇದ್ದು, ಆದಷ್ಟು ಬೇಗನೆ ಅವರನ್ನು ನ್ಯಾಯದ ಕೈಗಳಿಗೆ ಒಪ್ಪಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ರಾಜಕೀಯ ವಿರೋಧಿಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಎದುರಿಸಲಾಗದೆ ಇಂತಹ ಅಡ್ಡದಾರಿ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು @BJP4Karnataka ಮತ್ತು ಜೆಡಿಎಸ್‌ನ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ. ಹತ್ತು ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಪಕ್ಷವೊಂದು ಚುನಾವಣೆ ಗೆಲ್ಲಲು ಸುಳ್ಳು ಸುದ್ದಿಯ ಮೊರೆ ಹೋಗುವಂತಹ ಹೀನಾಯ ಸ್ಥಿತಿಗೆ ತಲುಪಬಾರದಿತ್ತು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ
ಸುಳ್ಳು ಸುದ್ದಿಯ ಸೃಷ್ಟಿಕರ್ತರು, ಅವರ ಬೆನ್ನ ಹಿಂದೆ ಬೆಂಬಲಕ್ಕೆ ನಿಂತಿರುವವರು ಹೀಗೆ ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ. ಸುಳ್ಳು ಸುದ್ದಿಗಳನ್ನು ನಂಬಿ ಶೇರ್‌ ಮಾಡುವ ಮುನ್ನ ಎಚ್ಚರಿಕೆ ವಹಿಸಿ ಎಂದು ಸಿಎಂ ಮನವಿ ಮಾಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button