Kannada NewsKarnataka NewsLatest

*ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸುಳ್ಳು ಸುದ್ದಿ ಹರಡುವವರನ್ನು ನಿಯಂತ್ರಿಸಲು ಗೃಹ ಇಲಾಖೆ, ಐಟಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸುಳ್ಳು ಸುದ್ದಿಯಿಂದ ಕೋಮುಗಲಭೆ, ಗದ್ದಲ, ಗೌರವಕ್ಕೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಇವುಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಭೇಟಿ ವಿಚಾರವಾಗಿ ಅವರ ಜತೆ ನಮ್ಮ ಪಕ್ಷದ ಪ್ರಣಾಳಿಕೆ ಹಾಗೂ ಇತರೆ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಎನ್ ಆರ್ ಐ ವಿಚಾರ, ಬೆಂಗಳೂರಿನಲ್ಲಿ ಉಚಿತ ವೈ-ಫೈ ವಲಯ ನಿರ್ಮಾಣ ಸಂಬಂಧ ಸಭೆಯ ದಿನಾಂಕ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button