
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಕ್ರಿಯವಾಗಿದ್ದ ನಕಲಿ ನೋಟು ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ದಾಳಿ ವೇಳೆ 500 ರೂ. ಮುಖಬೆಲೆಯ 14 ಕೋಟಿಗೂ ಅಧಿಕ ರೂ. ನಷ್ಟು ಹಣ ಪತ್ತೆಯಾಗಿದೆ.
ಸ್ಥಳೀಯರೊಬ್ಬರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿನಗರದ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ ನಕಲಿ ನೋಟುಗಳು ಪತ್ತೆಯಾಗಿದೆ. ಪೊಲೀಸರು ಪರಿಶೀಲನೆ ನಡೆಸಿದಾಗ ಭಾರತೀಯ ರಿಸರ್ವ್ ಬ್ಯಾಂಕ್ ಬರಹ ಇಲ್ಲದ, ಗವರ್ನರ್ ಸಹಿ ಇಲ್ಲದ ನೋಟುಗಳು ಪತ್ತೆಯಾಗಿದೆ. ಅಲ್ಲದೇ ನೋಟುಗಳ ಮೇಲೆ ‘ಮೂವಿ ಶೂಟಿಂಗ್ ಪರ್ಪಸ್ ಎಂದೂ ಸಹ ಬರೆದಿರುವುದು ಬೆಳಕಿಗೆ ಬಂದಿದೆ. ನೋಟಿನ ಸಂಖ್ಯೆಯಲ್ಲಿ ಸೊನ್ನೆ ಅಷ್ಟೇ ನಮೂದು ಮಾಡಲಾಗಿದ್ದು ಯಾವ ಉದ್ದೇಶಕ್ಕಾಗಿ ಈ ನೋಟುಗಳನ್ನು ಬಳಸಲಾಗುತ್ತಿದೆ ಅನ್ನೋದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.