Kannada NewsKarnataka NewsLatest

ನೂತನ ಎಸ್ಪಿಗೆ ತವರಿನ ಸನ್ಮಾನ

ನೂತನ ಎಸ್ಪಿಗೆ ತವರಿನ ಸನ್ಮಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ-

ಬೆಳಗಾವಿ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ ಎಂದು ನೂತನ ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.

ಗುರುವಾರ ನಗರದ ಲಕ್ಷ್ಮೀ ಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಗೆ ಆಗಮಿಸಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯಿಂದ ಆಶೀರ್ವಾದ ಪಡೆದು ಮಾತನಾಡಿದರು.

೨೦೧೪ರಲ್ಲಿ ಹುಕ್ಕೇರಿ ಹಿರೇಮಠದ ಶ್ರೀಗಳಿಂದ ಆಶೀರ್ವಾದ ಪಡೆದಿದ್ದೆ. ಉಡುಪಿ, ಮಂಗಳೂರು, ಬಳ್ಳಾರಿಯಲ್ಲಿ ಕಾರ್ಯನಿರ್ವಹಿಸಿ ಈಗ ತವರು ಜಿಲ್ಲೆ ಬೆಳಗಾವಿಯಲ್ಲಿ ಸೇವೆ ಸಲ್ಲಿಸಲು ಬಂದಿರುವುದಕ್ಕೆ ಶ್ರೀಗಳ ಆಶೀರ್ವಾದ ಕಾರಣ ಎಂದರು.

Home add -Advt

ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ ನಿರಂತರ ಶ್ರಮಿಸುವುದರೊಂದಿಗೆ ಜನ ಸಾಮಾನ್ಯರು ನೆಮ್ಮದಿಯಿಂದ ಬದುಕಲು ಹೆಚ್ಚು ಕಾರ್ಯ ಮಾಡುತ್ತೇನೆ ಎಂದರು.

ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪೊಲೀಸ್ ಇಲಾಖೆ ಜನರ ರಕ್ಷಣೆಗಾಗಿ ಇರುವಂತಹದ್ದು ಇಂಥ ಇಲಾಖೆಗೆ ಬೆಳಗಾವಿ ಎಸ್ಪಿಯಾಗಿ ಆಗಮಿಸಿರುವ ಲಕ್ಷ್ಮಣ ನಿಂಬರಗಿ ಅವರು ಈ ಭಾಗಕ್ಕೆ ಇನ್ನೂ ಹೆಚ್ಚು ಕೆಲಸ ಮಾಡಿ ಎಲ್ಲರಿಗೂ ಕೂಡ ನ್ಯಾಯಯುತ ಬದುಕು ನಡೆಸಲು ಪ್ರೇರೆಪಣೆ ನೀಡಲಿ ಎಂದು ಹಾರೈಸಿದರು.

ಸುನೀತಾ ನಾಗಲೋತಿಮಠ, ವೀರುಪಾಕ್ಷಯ್ಯ ನೀರಲಗಿಮಠ, ಕೆಎಲ್‌ಇ ಡಾ. ನಂದಿಶ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

Back to top button