Belagavi NewsBelgaum NewsElection NewsKannada NewsKarnataka NewsNationalPolitics

ಸಂಸದೆ ಪ್ರಿಯಂಕಾಗೆ ಸಿಹಿ ತಿನಿಸಿ, ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕೋಡಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಗೋಕಾಕ ನಗರದ ನಿವಾಸಕ್ಕೆ ಆಗಮಿಸಿದ ಪ್ರಿಯಂಕಾ ಜಾರಕಿಹೊಳಿ ಅವರನ್ನು ಕುಟುಂಬದ ಸದಸ್ಯರು ಸಿಹಿ ತಿನಿಸಿ, ಆರತಿ ಬೆಳಗಿ ಪ್ರೀತಿಯಿಂದ ಸ್ವಾಗತಿಸಿದರು.

ಇದೇ ವೇಳೆ ಚಿಕ್ಕೋಡಿ ಲೋಕಸಭಾ ಸಂಸದರಾಗಿ ಆಯ್ಕೆಯಾದ ಪ್ರಿಯಂಕಾ ಜಾರಕಿಹೊಳಿ ಅವರು ಗೋಕಾಕ ನಗರದ ನಿವಾಸಕ್ಕೆ ಆಗಮಿಸಿ ತಾಯಿ ಶಕುಂತಲಾ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು.

ನಂತರ ಗೋಕಾಕ ನಗರದಲ್ಲಿರುವ ಅಜ್ಜ ಲಕ್ಷ್ಮಣರಾವ್ ಜಾರಕಿಹೊಳಿ, ಅಜ್ಜಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪುಷ್ಪ ನಮನಗಳನ್ನು ಸಲ್ಲಿಸಿದರು.

ಇದಕ್ಕೂ ಮುಂಚೆ ಚಿಕ್ಕೋಡಿ ಲೋಕಸಭಾ ಸಂಸದೆಯಾಗಿ ಆಯ್ಕೆಯಾದ ನಂತರ ‌ಮೊದಲ ಬಾರಿಗೆ ಗೋಕಾಕ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪ್ರಿಯಂಕಾ ಜಾರಕಿಹೊಳಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ, ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button