ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ 7 -8 ತಿಂಗಳಾದರೂ ಪರಿಹಾರ ಸಿಕ್ಕಿಲ್ಲ ಎಂದು ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಈ ಕುರಿತು ಗಮನ ಸೆಳೆದರು.
ಜೊತೆಗೆ ಕೋರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿ ನಗರದಲ್ಲಿ ಕೋರೊನಾ ಟೆಸ್ಟ್ ಲ್ಯಾಬ್ ಪ್ರಾರಂಭಿಸಬೇಕು. ಈಗಾಗಲೇ ಈ ಕುರಿತು ಸಂಬಂಧಿಸಿದ ಸಚಿವರಿಗೆ ಮತ್ತು ಮುಖ್ಯ ಮಂತ್ರಿಗಳಿಗೆ ಪತ್ರದ ಮೂಲಕ ಮನವಿಯನ್ನು ಮಾಡಿದ್ದೇನೆ. ಆದಷ್ಟು ಶೀಘ್ರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಪ್ರತಿ ವ್ಯಕ್ತಿಯ ಟೆಸ್ಟ್ ಗೆ ಬೆಳಗಾವಿಗೆ ಬರುವುದು ಕಷ್ಟವಾಗುತ್ತಿದೆ ಎಂದು ಗಣೇಶ ಹುಕ್ಕೇರಿ ಹೇಳಿದರು.
ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಂಭಾವ್ಯ ಪ್ರವಾಹದ ಕುರಿತು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ಪ್ರತಿ ಬಾರಿ ಜನರು ಸಂಕಷ್ಟಕ್ಕೊಳಗಾಗುತ್ತಿದ್ದಾರೆ. ಈ ಬಾರಿ ವಿಶೇಷ ಗಮನ ಹರಿಸಬೇಕು ಎಂದು ಅವರು ಕೋರಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ