*ದೇವಸ್ಥಾನದ ದಾರಿ ದುರಂತದಲ್ಲಿ ಅಂತ್ಯ*: *ಕಾರಿನಲ್ಲಿದ್ದ ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ದೇವಸ್ಥಾನಕ್ಕೆ ತೆರಳುತ್ತಿದ್ದ ಕುಟುಂಬಕ್ಕೆ ವಿಧಿ ಕ್ರೂರವಾಗಿ ಕಾದಿತ್ತು. ಸಂತೋಷದಿಂದ ಆರಂಭವಾಗಿದ್ದ ಪ್ರವಾಸ ಕ್ಷಣಾರ್ಧದಲ್ಲಿ ದುರಂತವಾಗಿ ಮಾರ್ಪಟ್ಟಿದೆ. ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತ ಇಬ್ಬರ ಜೀವವನ್ನು ಬಲಿ ಪಡೆದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕೂ ಮುನ್ನ ಕುಟುಂಬದ ಸದಸ್ಯರು ಕಾರಿನಲ್ಲಿ ರೀಲ್ಸ್ ಮಾಡಿ ವಾಟ್ಸ್‌ಆ್ಯಪ್ ಸ್ಟೇಟಸ್ ಹಂಚಿಕೊಂಡಿದ್ದರು ಎಂಬ ಮಾಹಿತಿಯೂ ಹೊರಬಂದಿದೆ. ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿಯ … Continue reading *ದೇವಸ್ಥಾನದ ದಾರಿ ದುರಂತದಲ್ಲಿ ಅಂತ್ಯ*: *ಕಾರಿನಲ್ಲಿದ್ದ ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ*