ಪ್ರಗತಿವಾಹಿನಿ ಸುದ್ದಿ: ಮೈಸೂರಲ್ಲಿ ಖ್ಯಾತ ವೈದ್ಯೆ ನಿಗೂಢವಾಗಿ ಸಾವನಪ್ಪಿದ್ದಾರೆ. ಮೈಸೂರು ನಗರದ ಚೆಲುವಾಂಬ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ವಿದ್ಯಾಧರೆ (42) ಲಕ್ಷ್ಮೀಪುರಂನ ಅಪಾರ್ಟ್‌ಮೆಂಟ್‌ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಮೃತರ ಪತಿ ಕೆ.ಆರ್.ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಷಣ್ಮುಖ ಹಾಗೂ ಮೂವರು ಮಕ್ಕಳೊಂದಿಗೆ ವಾಸವಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕರ್ತವ್ಯ ಮುಗಿಸಿ ಶನಿವಾರ ರಾತ್ರಿ ಮನೆಗೆ ಬಂದ ವಿದ್ಯಾಧರೆ, ಮಕ್ಕಳೊಂದಿಗೆ ರೂಮ್ ನಲ್ಲಿ ಮಲಗಿದ್ದಾರೆ. ಭಾನುವಾರ ಬೆಳಿಗ್ಗೆ 9 ಗಂಟೆಯಾದರೂ ಹೊರ ಬಾರದ್ದರಿಂದ ಅನುಮಾನಗೊಂಡು ಡಾ.ಷಣ್ಮುಖ ಅವರು ಹೋಗಿ ಕೊಠಡಿ ಪರೀಕ್ಷಿಸಿದ್ದು, ಮೃತಪಟ್ಟಿರುವುದು ಗೊತ್ತಾಗಿದೆ. ಅವರ ಸಾವಿನ ಬಗ್ಗೆ ಅನುಮಾನವಿದೆ’ ಎಂದು ಮೃತರ ಸಹೋದರ ಶ್ರೀಕಾಂತ್ ದೂರು ನೀಡಿದ್ದಾರೆ.
ಬೆರಳಚ್ಚು ತಂಡದೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ