
ಪ್ರಗತಿವಾಹಿನಿ ಸುದ್ದಿ: ನಾಡಿನ ಪ್ರಸಿದ್ಧ ಸೂಫಿ ಸಂತ ಡಾ. ಸೈಯದ್ ಷಾ ಖುಸ್ರೋ ಹುಸೈನಿ ಸಾಹೇಬ್ (79) ಅವರು ನಿಧನ ಹೊಂದಿದ್ದಾರೆ
ಇವರು ಸ್ವಾಜಾ ಬಂದಾ ನವಾಝ್ ದರ್ಗಾದ ಪೀಠಾಧಿಪತಿ ಹಾಗೂ ಕೆ.ಬಿ.ಎನ್ ವಿಶ್ವ ವಿದ್ಯಾಲಯದ ಕುಲಪತಿ, ವಿದ್ವಾಂಸರಾಗಿದ್ದ ಇವರಿಗೆ ಕಳೆದ ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ನಿಧನರಾಗಿದ್ದು, ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಖುಸ್ರೋ ಹುಸೈನಿ ಸಾಹೇಬ್ ಅವರು ಚಿಸ್ತಿ ಮತ್ತು ಸೂಫಿ ಪರಂಪರೆಯ ಪ್ರಮುಖ ವ್ಯಕ್ತಿಯಾಗಿದ್ದು, ಪ್ರಸಿದ್ಧ ಸೂಫಿ ಸಂತ ಹರ್ಝತ್ ಸ್ವಾಜಾ ಬಂದಾ ನವಾಝ್ ನ 23 ನೇ ನೇರ ವಂಶಸ್ಥರಾಗಿದ್ದರು.
ವಿಶೇಷವಾಗಿ ಮಹಿಳೆಯರ ವಿದ್ಯಾಭ್ಯಾಸಕ್ಕೆ ಒತ್ತು ನೀಡಿದ್ದ ಸೈಯದ್ ಶಹಾ ಖುಸ್ರೋ ಹುಸೇನಿ ಮಹಿಳೆಯರಿಗಾಗಿಯೇ ಪ್ರೌಢಶಾಲೆ, ಪದವಿಪೂರ್ವ, ಪದವಿ ಹಾಗೂ ಅರೇಬಿಕ್ ಭಾಷೆಯ ಕಾಲೇಜುಗಳನ್ನು ತೆರೆದಿದ್ದರು. ಈ ಮೂಲಕ ಸಾವಿರಾರು ವಿಧ್ಯಾರ್ಥಿ, ವಿದ್ಯಾರ್ಥಿನಿಯರ ಜೀವನಕ್ಕೆ ದಾರಿ ದೀಪವಾಗಿದ್ದರು.