
ಪ್ರಗತಿವಾಹಿನಿ ಸುದ್ದಿ: ಪ್ರಸಿದ್ಧ ತಬಲಾ ಮಾಂತ್ರಿಕ ಮತ್ತು ಸಂಯೋಜಕ ಜಾಕಿರ್ ಹುಸೇನ್ ಅವರು ನಿಧನರಾಗಿದ್ದಾರೆ. ಭಾನುವಾರ ಮುಂಜಾನೆ ಹುಸೇನ್ ಹೃದಯ ಸಂಬಂಧಿ ಸಮಸ್ಯೆಗಳಿಂದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದರು ಎಂದು ಅವರ ಸ್ನೇಹಿತ ರಾಕೇಶ್ ಚೌರಾಸಿಯಾ ಪಿಟಿಐಗೆ ತಿಳಿಸಿದ್ದಾರೆ.
ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾ ಅವರ ಹಿರಿಯ ಪುತ್ರರಾಗಿದ್ದ ಜಾಕಿರ್ ಹುಸೇನ್ ತಮ್ಮ ತಂದೆಯ ಹಾದಿಯಲ್ಲಿ ಸಾಗುವ ಮೂಲಕ ವಿಶ್ವ ವಿಖ್ಯಾತಿಯನ್ನು ಪಡೆದಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಅವರು ಐದು ಗ್ರಾಮಿ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬೆಳಗಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ