Kannada NewsKarnataka NewsLatestPolitics

*ಸಿಎಂ ಸಿದ್ದರಾಮಯ್ಯ ಹಾಗೂ ಜಯಪ್ರಕಾಶ ಹೆಗ್ಡೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು*

ಪ್ರಗತಿವಾಹಿನಿ ಸುದ್ದಿ; ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಶಾಸಕ ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಬಿಜೆಪಿಯ ಕೋಟಾ ಶ್ರೀನಿವಾಸ್ ಪೂಜಾರಿ ಬಗ್ಗೆ ಲಘುವಾಗಿ ಮಾತನಾಡಿರುವುದಕ್ಕೆ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡೀದಿದೆ.

Home add -Advt

ಶಾಸಕರನ್ನು ಸೆಳೆಯಲು ಬಿಜೆಪಿ 50 ಕೋಟಿ ಆಫರ್ ನೀಡಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಹಿಂದಿ, ಇಂಗ್ಲೀಷ್ ಬರಲ್ಲ ಅನ್ನೋ ವಿಚಾರವಾಗಿ ಜಯಪ್ರಕಾಶ್ ಹೆಗ್ಡೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಚುನಾವಣಾ ಅಧಿಕಾರಿ ಮನೊಜ್ ಕುಮಾರ್ ಮೀನಾ ಅವರಿಗೆ ದೂರು ನೀಡಲಾಗಿದೆ.

Related Articles

Back to top button