Kannada NewsLatest

ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ್ ಗೆ ಬೀಳ್ಕೊಡುಗೆ ಹಾಗೂ ಸನ್ಮಾನ

ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ್ ಗೆ ಬೀಳ್ಕೊಡುಗೆ ಹಾಗೂ ಸನ್ಮಾನ

 ಪ್ರಗತಿವಾಹಿನಿ ಸುದ್ದಿ – ಬೆಳಗಾವಿ : ತಮ್ಮ ನಿವೃತ್ತಿಯ ನಂತರವೂ ಗಡಿ ಭಾಗದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಪ್ರಾದೇಶಿಕ ಆಯುಕ್ತ  ಪಿ.ಎ.ಮೇಘಣ್ಣವರ ಅವರು ಇಂದಿಲ್ಲಿ ಹೇಳಿದರು. ಮೂವತ್ತು ವರ್ಷಗಳ ಸುದೀರ್ಘ ಸೇವೆಯ ನಂತರ ಇಂದು ನಿವೃತ್ತಿ ಹೊಂದುತ್ತಿರುವ ಅವರು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮತ್ತು ಇತರ ಜನಪರ ಸಂಘಟನೆಗಳ ಸನ್ಮಾನವನ್ನು ಸ್ವೀಕರಿಸಿ ತಮ್ಮ ಕಚೇರಿಯ ಸಭಾಂಗಣದಲ್ಲಿ ಮಾತನಾಡಿದರು.
ತಾವು ತೊಂಭತ್ತರ ದಶಕದ ಕೊನೆಗೆ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕೆಲಸ ಮಾಡುವಾಗಿನ ಅನುಭವಗಳನ್ನು ಸ್ಮರಿಸಿಕೊಂಡರಲ್ಲದೇ ಪಾಲಿಕೆಯಲ್ಲಿ ಕನ್ನಡ ಅನುಷ್ಠಾನ ಮಾಡಿದ ರೀತಿಯನ್ನು ವಿವರಿಸಿದರು. ಕ್ರಿಯಾ ಸಮಿತಿ ಅಧ್ಯಕ್ಷ  ಅಶೋಕ ಚಂದರಗಿ ಅವರು ಮಾತನಾಡಿ, 1983 ರಿಂದ ಇಲ್ಲಿಯವರೆಗೆ  ತಾವು ಮೇಘಣ್ಣವರ ಅವರೊಂದಿಗೆ ಹೊಂದಿದ ಒಡನಾಟ ಮತ್ತು ಅವರು ಗಡಿ ಭಾಗದಲ್ಲಿ ಮಾಡಿದ ಕನ್ನಡ ಸೇವೆಯನ್ನು ಸ್ಮರಿಸಿಕೊಂಡರು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮಹಾದೇವ ತಳವಾರ,ದಲಿತ ನಾಯಕ ಮಲ್ಲೇಶ ಚೌಗುಲೆ ಮಾತನಾಡಿ ಮೇಘಣ್ಣವರ ಅವರ ಸೇವೆಯನ್ನು ಕೊಂಡಾಡಿದರು. ಯುನೈಟೆಡ್ ಸಮಾಜ ಕಲ್ಯಾಣ ಸಂಸ್ಥೆ ಮತ್ತು ನೃಪತುಂಗ ಯುವಕ ಸಂಘದ ವತಿಯಿಂದಲೂ ಮೇಘಣ್ಣವರ ದಂಪತಿಗಳನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಸಾಗರ್ ಬೋರಗಲ್ಲ ಮತ್ತಿತರರು ಸನ್ಮಾನಿಸಿದರು.////

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button