Latest

ಮೂರು ಕೃಷಿ ಕಾಯ್ದೆ ರದ್ದತಿ ಮಸೂದೆ ಅಂಗೀಕಾರ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲ ದಿನವೇ ವಿಪಕ್ಷಗಳು ಕಲಾಪಕ್ಕೆ ಅಡ್ದಿಪಡಿಸಿದ ಘಟನೆ ನಡೆದಿದೆ. ವಿಪಕ್ಷಗಳ ಗದ್ದಲ-ಕೋಲಾಹದ ನಡುವೆಯೇ ವಿವಾದಿತ ಮೂರು ಕೃಷಿ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ವಾಪಸ್ ಪಡೆಯಲಾಗಿದೆ.

ಲೋಕಸಭೆಯಲ್ಲಿ ವಿಪಕ್ಷ ಸಂಸದರ ಗದ್ದಲದ ನಡುವೆಯೇ ಕೇಂದ್ರ ಕೃಷಿ ಸಚಿವ ನರೇಂದ್ರ ಥೋಮರ್, ಕೃಷಿ ಕಾನೂನುಗಳ ರದ್ದತಿ ಮಸೂದೆ ಮಂಡಿಸಿದರು.

Related Articles

ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ-2020, ರೈತರ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ-2020 ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ-2020ನ್ನು ವಾಪಸ್ ಪಡೆಯುತ್ತಿರುವುದಾಗಿ ತಿಳಿಸಿದರು. ಮಸೂದೆ ಮಂಡನೆಯಾಗುತ್ತಿದ್ದಂತೆಯೇ ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಸೂದೆ ರದ್ದತಿ ಅಂಗೀಕರಿಸಲಾಯಿತು.

ಮಸೂದೆ ಬಗ್ಗೆ ಚರ್ಚಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಸದನದಲ್ಲಿ ಪ್ರತಿಭಟನೆ ನಡೆಸಿತು. ಸದನದಲ್ಲಿ ಕೋಲಾಹಲ ಹೆಚ್ಚುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

Home add -Advt

ಇದೇ ವೇಳೆ ರಾಜ್ಯಸಭೆಯಲ್ಲಿಯೂ ಮೂರು ಕೃಷಿ ತಿದ್ದುಪಡಿ ಮಸೂದೆ ವಾಪಸ್ ಪಡೆಯಲಾಗಿದೆ.
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಘೋಷಣೆ

Related Articles

Back to top button