ಶಾಸಕರ ಮನೆಯೆದುರು ಆತ್ಮಹತ್ಯೆಗೆ ಯತ್ನಿಸಿದ ರೈತ

ಪ್ರಗತಿವಾಹಿನಿ ಸುದ್ದಿ, ದಾವಣಗೆರೆ: ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ನಿವಾಸದ ಎದುರು ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಮಂಗಳವಾರ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಯತ್ನಿಸಿದ ರೈತನನ್ನು ಹೊನ್ನಾಳಿ ತಾಲೂಕಿನ ಮಾದೇನಹಳ್ಳಿ ಗ್ರಾಮದ ರೈತ ಪರಮೇಶ್ವರಪ್ಪ ಎಂದು ಗುರುತಿಸಲಾಗಿದೆ. ಪರಮೇಶ್ವರಪ್ಪ ಅವರು ಕಳೆದ ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದ ಜಮೀನನ್ನು ಬೇರೊಬ್ಬರು ಅತಿಕ್ರಮಿಸಿ ತಾವು ಬೆಳೆದ ತಾಳೆ ತೋಟವನ್ನು ನಾಶಪಡಿಸಿದ್ದು, ಈ ಕುರಿತು ಪೊಲೀಸ್‌ ಠಾಣೆಗೆ ದೂರು ನೀಡಿದರೂ ನ್ಯಾಯ ಒದಗಿಸಿಕೊಟ್ಟಿಲ್ಲ ಎಂಬ ಕಾರಣಕ್ಕೆ ಖಿನ್ನತೆಗೆ … Continue reading ಶಾಸಕರ ಮನೆಯೆದುರು ಆತ್ಮಹತ್ಯೆಗೆ ಯತ್ನಿಸಿದ ರೈತ