Belagavi NewsBelgaum NewsKannada NewsKarnataka News

*ಟವರ್ ಏರಿ ಕುಳಿತ ರೈತ: ಹೈರಾಣಾದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ಒಣಗುತ್ತಿರುವುದರಿಂದ ಕಂಗಾಲಾದ ರೈತನೊಬ್ಬ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಖೋತನಟ್ಟಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಂಡು ಚವ್ಹಾನ ಎಂಬ ರೈತ ಕಾಲುವೆಗೆ ನೀರು ಹರಿಸುವಂತೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಹತಾಶಗೊಂಡು ಟವರ್ ಏರಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಟವರ್ ಮೇಲೆಯೇ ಕುಳಿತು, ನೀರು ಬಿಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಆತಂಕ ಸೃಷ್ಟಿಸಿದರು.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದರು. ಐಗಳಿ ಪಿಎಸ್‌ಐ ಅಭಿಜೀತ್ ಅವರು ರೈತನೊಂದಿಗೆ ಮಾತುಕತೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ ರೈತನನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಯಿತು.ಈ ಘಟನೆ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button