
ಪ್ರಗತಿವಾಹಿನಿ ಸುದ್ದಿ, ಮಾಂಜರಿ:
ಸಾಲಬಾಧೆ ತಾಳದೆ ಚಿಕ್ಕೋಡಿ ತಾಲ್ಲೂಕಿನ ಇಂಗಳಿ ಗ್ರಾಮದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಹಾದೇವ್ ಶಿವಪ್ಪ ಅಂಬಿ ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಇವರು ಗ್ರಾಮದ ಸಹಕಾರಿ ಸಂಸ್ಥೆ ಹಾಗೂ ಇನ್ನಿತರ ಆರ್ಥಿಕ ಸಂಸ್ಥೆಯಲ್ಲಿ ಒಕ್ಕಲುತನಕ್ಕೆ ಸುಮಾರು 25 ಲಕ್ಷ ರೂಪಾಯಿಯನ್ನು ಸಾಲ ಪಡೆದಿದ್ದು ಒಕ್ಕಲು ತನಕ್ಕಾಗಿ ಮಾಡಿರುವ ಸಾಲ ಹೇಗೆ ತೀರಿಸಲೆಂದು ಮನನೊಂದ ರೈತ ಇಂದು ಮುಂಜಾನೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಪತ್ನಿ ತಿಳಿಸಿದ್ದಾಳೆ.
ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಗಣಪತಿ ಕೋಡಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ