Belagavi NewsBelgaum NewsKarnataka News

*ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ರೈತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೋಳಿ ಹೊಸೂರು ಗ್ರಾಮದ ರೈತ ಸಾಲ ಬಾಧೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ರುದ್ರಗೌಡ ನಿಂಗನಗೌಡ ಪಾಟೀಲ (60) ಆತ್ಮಹತ್ಯೆ ಮಾಡಿಕೊಂಡ ರೈತ. ಬ್ಯಾಂಕ್ ಹಾಗೂ ಕೈಗಡ ಸಾಲ ಸುಳಿಯಲ್ಲಿ ಸಿಲುಕಿದ್ದ ರೈತ ಮನೆಯ ಅಟ್ಟದ ಮೇಲೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಈ ಸಂಬಂಧ ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಗುರುರಾಜ ಕಲಬುರ್ಗಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button