Kannada NewsKarnataka NewsLatest

ಹುಲಿ ದಾಳಿಗೆ ರೈತ ಬಲಿ

ಪ್ರಗತಿವಾಹಿನಿ ಸುದ್ದಿ, ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಹುಲಿ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ.

ಗಣೇಶ (58) ಮೃತರು. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿದ್ದ ಜಾಗದಲ್ಲಿ ದನ ಮೇಯಿಸುತ್ತಿದ್ದಾಗ ಹಠಾತ್ತಾಗಿ ಹುಲಿಯೊಂದು ಅವರ ಮೇಲೆ ದಾಳಿ ನಡೆಸಿದೆ. ಅವರ ದೇಹವನ್ನು ಹುಲಿ ಅರ್ಧ ತಿಂದು ಬಿಟ್ಟು ಹೋಗಿದೆ.

ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಜಿ.ಡಿ.ಹರೀಶ್ ಗೌಡ ಅವರು ಅರಣ್ಯಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಮೃತ ಗಣೇಶ ಅವರ ಕುಟುಂಬಕ್ಕೆ ವೈಯಕ್ತಿಕ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಈ ಭಾಗದಲ್ಲಿ ಹುಲಿ ಹಾವಳಿ ಹೆಚ್ಚಿದ್ದು, ಜನ ಆತಂಕದಲ್ಲೇ ದಿನ ಕಳೆಯುವಂತಾಗಿದೆ. ಕೂಡಲೆ ಹುಲಿಯ ನಿಗ್ರಹಕ್ಕೆ ಸಾರ್ವಜನಿಕರು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button